ಮುಂಬೈ:ಮಹಾರಾಷ್ಟ್ರದಲ್ಲಿ ಡೆಡ್ಲಿ ವೈರಸ್ ಕೊರೊನಾ ರೌದ್ರನರ್ತನವಾಡ್ತಿದ್ದು, ಪ್ರತಿದಿನ ಅನೇಕ ಜೀವ ಬಲಿ ಪಡೆದುಕೊಳ್ಳುತ್ತಿದೆ. ಇದೀಗ ಮಹಾಮಾರಿ ಕೊರೊನಾ ವೈರಸ್ನಿಂದಾಗಿ ಬಾಲಿವುಡ್ನ ಹಿರಿಯ ನಿರ್ಮಾಪಕ ಅನಿಲ್ ಸೂರಿ ಸಾವನ್ನಪ್ಪಿದ್ದು, ಅವರಿಗೆ 77 ವರ್ಷ ವಯಸ್ಸಾಗಿತ್ತು ಎಂದು ಅವರ ಸಹೋದರ ರಾಜೀವ್ ಸೂರಿ ಮಾಹಿತಿ ನೀಡಿದ್ದಾರೆ.
ಕೊರೊನಾ ವೈರಸ್: ಬಾಲಿವುಡ್ ಹಿರಿಯ ನಿರ್ಮಾಪಕ ಅನಿಲ್ ಸೂರಿ ನಿಧನ - ಬಾಲಿವುಡ್ ನಿರ್ಮಾಪಕ
ಮಹಾಮಾರಿ ಕೊರೊನಾ ವೈರಸ್ನಿಂದ ಇದೀಗ ಬಾಲಿವುಡ್ ನಿರ್ಮಾಪಕ ಅನಿಲ್ ಸೂರಿ ಸಾವನ್ನಪ್ಪಿದ್ದು, ಅವರಿಗೆ 77 ವರ್ಷ ವಯಸ್ಸಾಗಿತ್ತು.
ಕಳೆದ ಜೂನ್ 2 ರಂದು ಅನಿಲ್ ಅವರಿಗೆ ಜ್ವರ ಕಾಣಿಸಿಕೊಂಡಿತು. ಮರು ದಿನವೇ ಉಸಿರಾಟದ ಸಮಸ್ಯೆ ಉಲ್ಭಣಗೊಂಡಿದೆ. ಜೂನ್ 3 ರಂದು ಮುಂಬೈನ ಪ್ರಮುಖ ಆಸ್ಪತ್ರೆ ಲೀಲಾವತಿ, ಹಿಂದೂಜಾ ಆಸ್ಪತ್ರೆಗಳಿಗೆ ಕರೆದುಕೊಂಡು ಹೋಗಲಾಗಿದ್ದು, ಅವರನ್ನು ಚಿಕಿತ್ಸೆಗಾಗಿ ದಾಖಲಿಸಿಕೊಳ್ಳಲು ಈ ಆಸ್ಪತ್ರೆಗಳು ನಿರಾಕರಿಸಿವೆ.
ಬುಧವಾರ ರಾತ್ರಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಗುರುವಾರ ಸಂಜೆ ವೆಂಟಿಲೇಟರ್ನಲ್ಲಿ ಇಡಲಾಗಿದೆ. ಆದರೆ ಗುರುವಾರ ಸಂಜೆ 7 ಗಂಟೆ ವೇಳೆಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಅನಿಲ್ ಸೂರಿ ನಟ ಅಮಿತಾಬ್ ಬಚ್ಚನ್ ಸೇರಿದಂತೆ ಅನೇಕ ನಟರ ಸಿನಿಮಾ ನಿರ್ಮಿಸಿದ್ದರು. ಇದಕ್ಕೂ ಮುಂಚಿತವಾಗಿ ನಿರ್ದೇಶಕ ಬಸು ಚಟರ್ಜಿ ಕೂಡ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು.