ಧನ್ಬಾದ್:ಆಟವಾಡುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡು ಮೂವರು ಮಕ್ಕಳು ಗಾಯಗೊಂಡಿರುವ ಘಟನೆ ಕೆಂದುವಾದ ಮಚಲಿ ಪಟ್ಟಿ ನಗರದಲ್ಲಿ ನಡೆದಿದೆ.
ಗಾಯಗೊಂಡಿರುವ ಮಕ್ಕಳಲ್ಲಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಎಸ್‌ಎನ್‌ಎಂಎಂಸಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡ ಇಬ್ಬರು ಮಕ್ಕಳನ್ನು ಕಾರ್ಕೆಂಡ್‌ನ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.
ತನಿಖೆ ನಂತರ ಘಟನೆಯ ಪೂರ್ಣ ಮಾಹಿತಿ ಲಭ್ಯವಾಗಲಿದೆ. ಸ್ಥಳೀಯರ ಮಾಹಿತಿ ಪ್ರಕಾರ ಬಾಂಬ್ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.