ಕರ್ನಾಟಕ

karnataka

ETV Bharat / bharat

ಸುಶಾಂತ್ ಸಿಂಗ್ ಕೇಸ್: ರಿಯಾ ಚಕ್ರವರ್ತಿಗೆ ಷರತ್ತುಬದ್ಧ ಜಾಮೀನು ನೀಡಿದ ಬಾಂಬೆ ಹೈಕೋರ್ಟ್ - ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣ

ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Bombay High court grants bail to actor Rhea Chakraborty
ರಿಯಾ ಚಕ್ರವರ್ತಿಗೆ ಜಾಮೀನು

By

Published : Oct 7, 2020, 11:43 AM IST

ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು, ಮತ್ತು ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ನಟಿ ರಿಯಾ ಚಕ್ರವರ್ತಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ.

ಆದರೆ, ಆಕೆಯ ಸಹೋದರ ಶೋಯಿಕ್ ಚಕ್ರವರ್ತಿಯ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ.

ಮಂಗಳವಾರ ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅಂತ್ಯವಾದ ಹಿನ್ನೆಲೆ ಪ್ರಕರಣದ ಅರ್ಜಿ ಮುಂಬೈನ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯದ ಮುಂದೆ ಬಂದಿತ್ತು. ವಿಚಾರಣೆ ನಡೆಸಿದ್ದ ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ರಿಯಾ ಸೇರಿದಂತೆ ಪ್ರಕರಣದಲ್ಲಿ ಬಂಧಿತ 20 ಆರೋಪಿಗಳ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು. ಇತ್ತ ರಿಯಾ ಜಾಮೀನಿಗಾಗಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಇಂದು ರಿಯಾಗೆ ಬಾಂಬೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ರಿಯಾ ಚಕ್ರವರ್ತಿಗೆ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್ ಮೇಲೆ ಜಾಮೀನು ನೀಡಲಾಗಿದೆ. ರಿಯಾ ಬಿಡುಗಡೆಯಾದ ನಂತರ 10 ದಿನಗಳ ಕಾಲ ಪೊಲೀಸ್ ಠಾಣೆಗೆ ಭೇಟಿ ನೀಡಿ ತನ್ನ ಉಪಸ್ಥಿತಿಯನ್ನು ಗುರುತಿಸಬೇಕು. ಪಾಸ್​ಪೋರ್ಟ್ ಠೇವಣಿ ಇಡಬೇಕು, ನ್ಯಾಯಾಲಯದ ಅನುಮತಿಯಿಲ್ಲದೆ ವಿದೇಶಕ್ಕೆ ಪ್ರಯಾಣಿಸಬಾರದು ಮತ್ತು ಮುಂಬೈ ತೊರೆಯಬೇಕಾದರೆ ತನಿಖಾಧಿಕಾರಿಗೆ ತಿಳಿಸಬೇಕು ಎಂದು ಹೈಕೋರ್ಟ್​ ಹೇಳಿದೆ.

ABOUT THE AUTHOR

...view details