ಕರ್ನಾಟಕ

karnataka

ETV Bharat / bharat

ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡ ಹುಡುಗ-ಹುಡುಗಿ! - ಪೊಲೀಸರು ತನಿಖೆ

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದ್ದು, ಘಟನೆಯಲ್ಲಿ 14 ವರ್ಷದ ಬಾಲಕಿ ಸಾವನ್ನಪ್ಪಿ ಹುಡುಗ ಗಂಭೀರವಾಗಿ ಗಾಯಗೊಂಡಿದ್ದಾನೆ.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ

By

Published : Sep 28, 2019, 4:32 PM IST

ಮಥುರಾ(ಉತ್ತರಪ್ರದೇಶ):ಮನೆಯಲ್ಲಿ ಯಾರು ಇಲ್ಲದ ವೇಳೆ 14 ವರ್ಷದ ಹುಡುಗಿ ಹಾಗೂ 17 ವರ್ಷದ ಹುಡುಗ ಬೆಂಕಿ ಹಚ್ಚಿಕೊಂಡಿರುವ ಘಟನೆ ಉತ್ತರಪ್ರದೇಶದ ಮಥುರಾದ ಕುಂಜೇರ್​ ಗ್ರಾಮದಲ್ಲಿ ನಡೆದಿದೆ.

ಘಟನೆಯಲ್ಲಿ 14 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 17 ವರ್ಷದ ಮುಖೇಶ್ ಎಂಬಾತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿರುವುದಾಗಿ ತಿಳಿದು ಬಂದಿದೆ. ಹುಡುಗಿ ಮನೆಯಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಮನೆಯಲ್ಲಿ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ.

ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಹುಡುಗ ಮನೆಯಿಂದ ಹೊರಗಡೆ ಓಡಿ ಬಂದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಹುಡುಗಿ ಮನೆಯೊಳಗೆ ಸಾವನ್ನಪ್ಪಿದ್ದಾಳೆ. ಇವರಿಬ್ಬರು ಯಾವ ಕಾರಣಕ್ಕಾಗಿ ಬೆಂಕಿ ಹಚ್ಚಿಕೊಂಡಿದ್ದಾರೆ ಎಂಬುದರ ಕುರಿತು ಇಲ್ಲಿಯವರೆಗೆ ಯಾವುದೇ ರೀತಿಯ ಮಾಹಿತಿ ಲಭ್ಯವಾಗಿಲ್ಲ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿದು ಬಂದಿದೆ.

ABOUT THE AUTHOR

...view details