ನವದೆಹಲಿ: ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ.
ಇಂದು ರಾಷ್ಟ್ರಪತಿ, ಪ್ರಧಾನಿಯನ್ನು ಭೇಟಿ ಮಾಡಲಿರುವ ಬ್ರೆಜಿಲ್ ಅಧ್ಯಕ್ಷ - ಗಣರಾಜ್ಯೋತ್ಸವದ ಮುಖ್ಯ ಅತಿಥಿ ಬ್ರೆಜಿಲ್ ಅಧ್ಯಕ್ಷ
ಶುಕ್ರವಾರ ಭಾರತಕ್ಕೆ ಆಗಮಿಸಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿ ಮಾಡಲಿದ್ದಾರೆ.
ಬ್ರೆಜಿಲ್ ಅಧ್ಯಕ್ಷ
ಪಿಎಂ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಬೋಲ್ಸನಾರೊ ಕುಟುಂಬ ಸಮೇತ ಶುಕ್ರವಾರ ಭಾರತಕ್ಕೆ ಆಗಮಿಸಿದ್ದು, ನಿನ್ನೆಯಿಂದ ಅವರ ನಾಲ್ಕು ದಿನಗಳ ಭಾರತ ಭೇಟಿ ಆರಂಭವಾಗಿದೆ. ಇಂದು ಗಣ್ಯರನ್ನು ಭೇಟಿ ಮಾಡಲಿದ್ದು, ನಾಳೆ ನಡೆಯುವ 71ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.