ಚಂಡೀಗಢ: ಪಂಜಾಬ್‌ನ ತಾರ್ನ್ ತರಣ್ ಜಿಲ್ಲೆಯಲ್ಲಿನ ಭಾರತ - ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಐವರು ನುಸುಳುಕೋರರನ್ನು ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.
ಇಂಡೋ-ಪಾಕ್ ಗಡಿಯಲ್ಲಿ ಐವರು ನುಸುಳುಕೋರರ ಹತ್ಯೆ - ಭಾರತ-ಪಾಕಿಸ್ತಾನ ಗಡಿ ಪ್ರದೇಶ
ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಐವರು ನುಸುಳುಕೋರರನ್ನು ಬಿಎಸ್ಎಫ್ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ನುಸುಳುಕೋರರ ಹತ್ಯೆ
ಗಡಿ ಪ್ರದೇಶದ ಬಳಿ ಇಂದು ಮುಂಜಾನೆ 4.45 ರ ಸುಮಾರಿಗೆ ಬಿಎಸ್ಎಫ್ ಸಿಬ್ಬಂದಿ ಕೆಲ ವ್ಯಕ್ತಿಗಳ ಅನುಮಾನಾಸ್ಪದ ಚಲನೆಯನ್ನು ಗಮನಿಸಿದ್ದಾರೆ. ಇವರನ್ನು ತಡೆಯಲು ಹೋದಾಗ ಭದ್ರತಾ ಪಡೆ ಮೇಲೆ ನುಸುಳುಕೋರರು ಗುಂಡು ಹಾರಿಸಲು ಯತ್ನಿಸಿದ್ದಾರೆ. ಈ ವೇಳೆ, ಬಿಎಸ್ಎಫ್ ಸಿಬ್ಬಂದಿ ಐವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
Last Updated : Aug 22, 2020, 2:57 PM IST