ಕತುವಾ (ಜಮ್ಮುಕಾಶ್ಮೀರ): ಜಮ್ಮುಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಭದ್ರತಾ ಪಡೆ ಪಾಕಿಸ್ತಾನಿ ಡ್ರೋನ್ ಒಂದನ್ನು ಇಂದು ಹೊಡೆದುರುಳಿಸಿದೆ.
ಜಮ್ಮುಕಾಶ್ಮೀರ ಗಡಿ ಸಮೀಪ ಪಾಕ್‌ನ ಶಸ್ತ್ರಸಜ್ಜಿತ ಡ್ರೋನ್ ಹೊಡೆದುರುಳಿಸಿದ ಸೇನೆ - ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್ಎಫ್ ಪಡೆ
ಜಮ್ಮು ಮತ್ತು ಕಾಶ್ಮೀರದ ಕತುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರತೀಯ ಗಡಿ ಭದ್ರತಾ ಪಡೆ ಪಾಕಿಸ್ತಾನಿ ಡ್ರೋನ್ ಒಂದನ್ನು ಹೊಡೆದುರುಳಿಸಿದೆ.
ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್ಎಫ್ ಪಡೆ
ಕತುವಾ ಜಿಲ್ಲೆಯ ಹಿರಾನಗರ ತಾಲೂಕಿನ ರತುವಾ ಗ್ರಾಮದ ಬಳಿ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಿರಾನಗರ ಸೆಕ್ಟರ್‌ನ ಕತುವಾ ಪ್ರದೇಶದಲ್ಲಿ ಡ್ರೋನ್ ಹಾರಾಟ ನಡೆಸುತ್ತಿರುವುದನ್ನು ಕಂಡು ಬಿಎಸ್‌ಎಫ್‌ನ ಪೆಟ್ರೋಲಿಂಗ್ ಪಡೆ ಅದರ ಮೇಲೆ ಎಂಟರಿಂದ ಒಂಬತ್ತು ಸುತ್ತು ಗುಂಡು ಹಾರಿಸಿದೆ. ಹೊಡೆದುರುಳಿಸಿದ ಡ್ರೋನ್ನಿಂದ ಶಸ್ತ್ರಾಸ್ತ್ರಗಳನ್ನು ಬಿಎಸ್ಎಫ್ ವಶಪಡಿಸಿಕೊಂಡಿದೆ.