ಕರ್ನಾಟಕ

karnataka

ETV Bharat / bharat

ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಬಿಎಸ್​ಎಫ್​ ಯೋಧ - ಗಡಿ ಭದ್ರತಾ ಪಡೆ

ಖಿನ್ನತೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದ ಯೋಧನೊಬ್ಬ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಶರಣಾದ ಬಿಎಸ್​ಎಫ್​ ಯೋಧ
ಆತ್ಮಹತ್ಯೆಗೆ ಶರಣಾದ ಬಿಎಸ್​ಎಫ್​ ಯೋಧ

By

Published : Aug 21, 2020, 3:47 PM IST

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯೋಧನೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಕುರಿತು ವರದಿಯಾಗಿದೆ.

169ನೇ ಬೆಟಾಲಿಯನ್‌ನ ಹೆಡ್ ಕಾನ್‌ಸ್ಟೆಬಲ್ ರಾಮ್ ಕುಮಾರ್, ತನ್ನ ಸೇವಾ ರೈಫಲ್‌ನಿಂದ ಗುಂಡು ಹಾರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರಾದ ಬ್ರಾನ್ವಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಯೋಧ ತೀವ್ರ ಖಿನ್ನತೆ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details