ಮುಂಬೈ:ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇದರ ಪರಿಣಾಮ ಆರು ಅಂತಸ್ತಿನ ಹಳೇ ಕಟ್ಟಡವೊಂದು ಕುಸಿದು ಬಿದ್ದಿದ್ದು, ಇಬ್ಬರು ಸಾವನ್ನಪ್ಪಿದ್ದಾನೆ.
ಕಟ್ಟಡದ ಅವಶೇಷಗಳ ಅಡಿಯಲ್ಲಿ ತಾಯಿ-ಮಗಳು ಸೇರಿದಂತೆ ಅನೇಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮುಂಬೈನ ಕೋಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.