ಮಥರಾ:ಉತ್ತರ ಪ್ರದೇಶದ ಕೆಲ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಪ್ರವಾಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಜನಸಾಮಾನ್ಯರು ಇನ್ನಿಲ್ಲದ ರೀತಿಯ ತೊಂದರೆ ಅನುಭವಿಸುವಂತಾಗಿದೆ.
ಮಳೆಯಿಂದಾಗಿ ಅರ್ಧ ಮುಳುಗಿದ ಬಸ್, ಹರಸಾಹಸ ಪಟ್ಟು ಪ್ರಯಾಣಿಕರ ರಕ್ಷಣೆ
ದೇಶದ ಕೆಲ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕೆಲವು ಸ್ಥಳಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ.
ಮಳೆಯಿಂದಾಗಿ ಅರ್ಧ ಮುಳುಗಿದ ಬಸ್
ಮಥುರಾದಲ್ಲಿ ಖಾಸಗಿ ಬಸ್ವೊಂದು ಪ್ರವಾಹದಲ್ಲಿ ಸಿಲುಕಿಕೊಂಡು ಪ್ರಯಾಣಿಕರಿಗೆ ತೊಂದರೆಯಾದ ಘಟನೆ ನಡೆದಿದೆ. ಈ ವೇಳೆ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 15 ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ.
ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ವೇಳೆ ಏಕಾಏಕಿಯಾಗಿ ನೀರು ಹರಿದು ಬಂದಿರುವ ಪರಿಣಾಮ ಬಸ್ಸಿನ ಅರ್ಧಭಾಗ ನೀರಿನಲ್ಲಿ ಮುಳುಗಿದೆ. ತಕ್ಷಣವೇ ಕಾರ್ಯಾಚರಣೆ ನಡೆಸಿ ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ.