ಹೈದರಾಬಾದ್:ಬಿಹಾರದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆ ಜೊತೆ ಮಧ್ಯಪ್ರದೇಶ, ಕರ್ನಾಟಕ, ಒಡಿಶಾ, ಉತ್ತರಪ್ರದೇಶ ಸೇರಿದಂತೆ ದೇಶದ 10ಕ್ಕೂ ಹೆಚ್ಚು ರಾಜ್ಯಗಳ 56 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದೆ.
11 ರಾಜ್ಯಗಳ 56 ವಿಧಾನಸಭಾ ಉಪಚುನಾವಣೆ ಮತ ಎಣಿಕೆ: ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ - 12ಕ್ಕೂ ಹೆಚ್ಚು ರಾಜ್ಯಗಳ ಮತ ಎಣಿಕೆ ಆರಂಭ
ಮಧ್ಯಪ್ರದೇಶ, ಕರ್ನಾಟಕ, ಒಡಿಶಾ, ಉತ್ತರಪ್ರದೇಶ ಸೇರಿದಂತೆ ದೇಶದ 10ಕ್ಕೂ ಹೆಚ್ಚು ರಾಜ್ಯಗಳ 56 ವಿಧಾನಸಭಾ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆದಿದೆ.
ದೇಶದ 12ಕ್ಕೂ ಹೆಚ್ಚು ರಾಜ್ಯಗಳ 56 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ
ಉತ್ತರಪ್ರದೇಶದಲ್ಲಿ 7 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 4, ಎಸ್ಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಗುಜರಾತ್‌ನ 8 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಮಣಿಪುರದಲ್ಲಿ 1 ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳ ಫಲಿತಾಂಶವು ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ. 28 ಕ್ಷೇತ್ರಗಳ ಪೈಕಿ 17 ಕ್ಷೇತ್ರದಲ್ಲಿ ಬಿಜೆಪಿ, 7 ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಮುನ್ನಡೆ ಸಾಧಿಸಿದೆ.