ಕರ್ನಾಟಕ

karnataka

ETV Bharat / bharat

ಕೇಂದ್ರ ಪ್ರವಾಸೋದ್ಯಮ ಸಚಿವರೊಂದಿಗೆ ಸಿ.ಟಿ. ರವಿ ಭೇಟಿ, ಚರ್ಚೆ - Sri Chamundeshwari Devi Temple

ಕೇಂದ್ರ ಸರ್ಕಾರದ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರನ್ನು ಸಚಿವ ಸಿ.ಟಿ. ರವಿ ಭೇಟಿ ಮಾಡಿ, ಭಾರತೀಯ ಪರಂಪರೆ ಮತ್ತು ಸಂರಕ್ಷಣಾ ವಿಶ್ವವಿದ್ಯಾನಿಲಯ ಸ್ಥಾಪಿಸುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಿದರು.

ಪ್ರಹ್ಲಾದ್ ಸಿಂಗ್ ಪಟೇಲ್​ರನ್ನು ಭೇಟಿ ಮಾಡಿದ ಸಚಿವ ಸಿ.ಟಿ. ರವಿ
ಪ್ರಹ್ಲಾದ್ ಸಿಂಗ್ ಪಟೇಲ್​ರನ್ನು ಭೇಟಿ ಮಾಡಿದ ಸಚಿವ ಸಿ.ಟಿ. ರವಿ

By

Published : Aug 19, 2020, 6:03 PM IST

ನವದೆಹಲಿ/ಬೆಂಗಳೂರು:ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರು ಬುಧವಾರ ಕೇಂದ್ರದ ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ಮೈಸೂರಿನಲ್ಲಿ ಭಾರತೀಯ ಪರಂಪರೆ ಮತ್ತು ಸಂರಕ್ಷಣಾ ವಿಶ್ವವಿದ್ಯಾನಿಲಯ ಸ್ಥಾಪಿಸುವ ಕುರಿತು ಸಚಿವ ಸಿ.ಟಿ. ರವಿ ಕೇಂದ್ರ ಪ್ರವಾಸೋದ್ಯಮ ಸಚಿವರಿಗೆ ಪ್ರಸ್ತಾವನೆಯನ್ನು ಸಲ್ಲಿಸಿದರು.

ಅಲ್ಲದೇ ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಮೂಲಸೌಕರ್ಯ, ಸೌಲಭ್ಯಗಳ ಅಭಿವೃದ್ಧಿಗಾಗಿ ‘ಪ್ರಶಾದ್​​’ ಯೋಜನೆಯಡಿ ಕರ್ನಾಟಕ ಸರ್ಕಾರಕ್ಕೆ ಹಣ ಬಿಡುಗಡೆ ಮಾಡಬೇಕೆಂದು ಸಿ.ಟಿ. ರವಿ ವಿನಂತಿಸಿದರು.

ABOUT THE AUTHOR

...view details