ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ಕಿಚ್ಚು ದಿನೇ ದಿನೇ ಹೆಚ್ಚುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಶುಕ್ರವಾರ ರಾತ್ರಿ ಸಿಎಎ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಅಜಾದ್ರನ್ನು ದೆಹಲಿ ಪೊಲೀಸರು ಮತ್ತೆ ವಶಕ್ಕೆ ಪಡೆದಿದ್ದಾರೆ. ನಿನ್ನೆ ಚಂದ್ರಶೇಖರ್ ಅವರನ್ನು ವಶಕ್ಕೆ ಪಡೆದಿದ್ದಾಗ ತಮ್ಮ ಬೆಂಬಲಿಗರ ಸಹಾಯದಿಂದ ಚಂದ್ರಶೇಖರ್ ತಪ್ಪಿಸಿಕೊಂಡಿದ್ದರು. ಆದರೆ ಶುಕ್ರವಾರ ತಡರಾತ್ರಿ ಜಾಮಾ ಮಸೀದಿ ಬಳಿ ಪ್ರತಿಭಟನೆ ವೇಳೆ ಚಂದ್ರಶೇಖರ್ ಪೊಲೀಸರ ಕೈಗೆ ಸಿಕ್ಕಿದ್ದಾರೆ.