ಲಖನೌ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ಉತ್ತರ ಪ್ರದೇಶದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ 6 ಜನರು ಬಲಿಯಾಗಿದ್ದಾರೆ.
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಇಬ್ಬರು, ಕಾನ್ಪುರ, ಸಂಭಾಲ್ ಮತ್ತು ಫಿರೋಜಾಬಾದ್ನಲ್ಲಿ ತಲಾ ಓರ್ವ ಸೇರಿದಂತೆ 6 ಜನರು ಬಲಿಯಾಗಿದ್ದಾರೆ. ಈ ಮೂಲಕ ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಹಲವೆಡೆ ಪ್ರತಿಭಟನಾಕಾರರನ್ನ ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.