ನವದೆಹಲಿ:ಸಿಎಎ ವಿರೋಧಿಸಿ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ಇನ್ನೂ ಮುಂದುವರೆದಿದೆ. ರಾಜಧಾನಿ ದೆಹಲಿಯ ಜಫರಾಬಾದ್ನಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಎನ್‌ಆರ್‌ಸಿ, ಸಿಎಎ ವಿರೋಧಿಸಿ ದೆಹಲಿ ರಸ್ತೆಗಿಳಿದ ಮಹಿಳೆಯರು: ಭಾರೀ ಪೊಲೀಸ್ ನಿಯೋಜನೆ - ದೆಹಲಿಯಲ್ಲಿ ಎನ್‌ಆರ್‌ಸಿ ವಿರುದ್ಧ ಮಹಿಳೆಯರ ಪ್ರತಿಭಟನೆ
ಸಿಎಎ ವಿರೋಧಿಸಿ ರಾಷ್ಟ್ರ ರಾಜಧಾನಿ ನವದೆಹಲಿಯ ಜಫರಾಬಾದ್ನಲ್ಲಿ ರಸ್ತೆ ತಡೆ ನಡೆಸಿ ಮಹಿಳಾ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್‌ಆರ್‌ಸಿ ವಿರೋಧಿಸಿ ಜಫರಾಬಾದ್ ಮೆಟ್ರೋ ನಿಲ್ದಾಣದ ಬಳಿ ಮಹಿಳೆಯರು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಜಫರಾಬಾದ್ ಪ್ರದೇಶದಲ್ಲಿ ಭಾರೀ ಗಲಭೆ ಉಂಟಾಯಿತು. ಪ್ರತಿಭಟನೆ ಹಿನ್ನೆಲೆ ಸ್ಥಳದಲ್ಲೇ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಜಫರಾಬಾದ್ ಮೆಟ್ರೋ ನಿಲ್ದಾಣದ ಬಳಿ ಮಹಿಳೆಯರು ರಸ್ತೆ ಮಧ್ಯೆಯೇ ಕುಳಿತು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನಾ ನಿರತ ಮಹಿಳೆಯರ ಮನವೊಲಿಸಲು ಪೊಲೀಸರು ಎಷ್ಟೇ ಪ್ರಯತ್ನಿಸಿದರೂ ಪ್ರತಿಭಟನೆ ಹತ್ತಿಕ್ಕಲು ಸಾಧ್ಯವಾಗಿಲ್ಲ. ಈ ಸಂದರ್ಭ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.