ನವದೆಹಲಿ: ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿ ಕಾರಿದ್ದಾರೆ.
ಪೌರತ್ವ ತಿದ್ದುಪಡಿ ಮಸೂದೆಯಿಂದ ಭಾರತದ ಸಂವಿಧಾನಕ್ಕೆ ದಾಳಿ ಮಾಡಲಾಗುತ್ತಿದೆ. ಈ ಮಸೂದೆಯನ್ನು ಬೆಂಬಲಿಸುವವರೆಲ್ಲರೂ ಭಾರತ ದೇಶದ ಬುನಾದಿ ಮೇಲೆ ದಾಳಿ ನಡೆಸಿ ನಾಶ ಮಾಡಿದಂತೆ ಎಂದು ರಾಗಾ ಟ್ವೀಟ್ ಮೂಲಕ ಕಿಡಿ ಕಾರಿದ್ದಾರೆ.