ನವದೆಹಲಿ: ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು ಕಾಶ್ಮೀರ ಹಾಗೂ ಲಡಾಖ್ನಲ್ಲಿ ಜನಜೀವನ ಮಟ್ಟ ಸುಧಾರಣೆಗಾಗಿ 520 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಅಡಿಯಲ್ಲಿ ಈ ವಿಶೇಷ ಪ್ಯಾಕೇಜ್ ಬಿಡುಗಡೆಗೆ ಅನುಮತಿ ನೀಡಲಾಗಿದೆ. ಈ ಪ್ಯಾಕೇಜ್ ಐದು ವರ್ಷದ ಅವಧಿಯದ್ದು, ಈ ಹಿನ್ನೆಲೆಯಲ್ಲಿ 2023-24ರೊಳಗೆ ಈ ಪ್ಯಾಕೇಜ್ ಎರಡೂ ಕೇಂದ್ರಾಡಳಿತ ಪ್ರದೇಶಗಳಿಗೆ ತಲುಪಲಿದೆ.
ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಎರಡೂ ಕೇಂದ್ರಾಡಳಿತ ಪ್ರದೇಶಗಳ ಜನಜೀವನ ಸುಧಾರಣೆಗೆ ಕೇಂದ್ರ ಸರ್ಕಾರ ಮತ್ತಷ್ಟು ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.
ಜಮ್ಮು ಕಾಶ್ಮೀರ ಹಾಗೂ ಲಡಾಖ್ನಲ್ಲಿರುವ ಬಡತನದ ಅನುಪಾತದ ಆಧಾರದ ಮೇಲೆ ಪ್ಯಾಕೇಜ್ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ಮಾಹಿತಿ ನೀಡಿದೆ.
ಪ್ರಧಾನಿ ಮೋದಿ ಸ್ಟಾರ್ ಯೋಜನೆ (STAR PROJECT) ಬಗ್ಗೆಯೂ ಮಾತನಾಡಿದ್ದು, ಶಿಕ್ಷಣ ವಲಯದಲ್ಲಿ ಅಮೂಲಾಗ್ರ ಬದಲಾವಣೆಗೆ ಈ ಯೋಜನೆ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದ್ದಾರೆ.