ನವದೆಹಲಿ: ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮಹತ್ವದ ನಿರ್ಧಾರವೊಂದರಲ್ಲಿ, ರೈತರಿಗೆ ಸಂಬಂಧಿಸಿದ ಅಗತ್ಯ ಸರಕುಗಳ ಕಾಯ್ದೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಸಭೆಯು ಅನುಮೋದನೆ ನೀಡಿದೆ.
ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಧಾರಗಳ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಇದು ಪ್ರಮುಖ ನಿರ್ಧಾರವಾಗಿದ್ದು, ಈ ನಿರ್ಣಯದಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
"ನಾವು ಅಗತ್ಯ ಸರಕುಗಳ ಕಾಯ್ದೆಗೆ ರೈತ ಸ್ನೇಹಿ ತಿದ್ದುಪಡಿಗಳನ್ನು ಮಾಡಿದ್ದೇವೆ. ಈ ನಿರ್ಧಾರದ ಮೂಲಕ ರೈತರಿಗೆ ನಿಯಂತ್ರಕ ವಾತಾವರಣವನ್ನು ಉದಾರೀಕರಣಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ರೈತರಿಗೆ ಅನುಕೂಲವಾಗಲು ಈ ನಿರ್ಧಾರಕ್ಕೆ ಬರಲಾಗಿದೆ.