ಕರ್ನಾಟಕ

karnataka

ಗರ್ಭಪಾತದ ಅನುಮತಿ ಮಿತಿ 24 ವಾರಗಳವರೆಗೆ ವಿಸ್ತರಿಸಲು ಕ್ಯಾಬಿನೆಟ್ ಅನುಮೋದನೆ

ಗರ್ಭಪಾತಕ್ಕೆ ಅನುಮತಿ ನೀಡುವ ಮಿತಿಯನ್ನು 24 ವಾರಗಳವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

By

Published : Jan 29, 2020, 4:47 PM IST

Published : Jan 29, 2020, 4:47 PM IST

abortions
ಗರ್ಭಪಾತ

ನವದೆಹಲಿ:ಗರ್ಭಪಾತಕ್ಕೆ ಅನುಮತಿ ನೀಡುವ ಕಾಲಾವಧಿ ಮಿತಿಯನ್ನು ಪ್ರಸ್ತುತ 20 ವಾರಗಳಿಂದ 24 ವಾರಗಳವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯ ಕಾಯ್ದೆ1971 ಕ್ಕೆ ತಿದ್ದುಪಡಿ ತರಲು, 2020 ರ ಗರ್ಭಧಾರಣೆಯ ವೈದ್ಯಕೀಯ ಮುಕ್ತಾಯ (ತಿದ್ದುಪಡಿ) ಮಸೂದೆಗೆ ಕ್ಯಾಬಿನೆಟ್ ಅನುಮೋದನೆ ನೀಡಿತು.

ಸಚಿವ ಸಂಪುಟ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಗರ್ಭಪಾತಕ್ಕೆ ಅನುಮತಿ ನೀಡುವ ಮಿತಿಯನ್ನು ಪ್ರಸ್ತುತ 20 ರಿಂದ 24 ವಾರಗಳವರೆಗೆ ವಿಸ್ತರಿಸಲಾಗಿದೆ ಎಂದರು.

ಈ ಮಸೂದೆಯಿಂದ ಮಹಿಳೆಯರಿಗೆ ಗರ್ಭಧಾರಣೆಯನ್ನು ಸುರಕ್ಷಿತವಾಗಿ ಮುಕ್ತಾಯಗೊಳಿಸಲು ಸಹಾಯವಾಗುತ್ತದಲ್ಲದೇ ಮಹಿಳೆಯರಿಗೆ ಅವರ ದೇಹದ ಮೇಲೆ ಸಂತಾನೋತ್ಪತ್ತಿ ಹಕ್ಕನ್ನು ನೀಡುತ್ತದೆ ಎಂದು ತಿಳಿಸಿದರು.

24 ವಾರಗಳವರೆಗೆ ವಿಸ್ತರಣೆಯು ಅತ್ಯಾಚಾರಕ್ಕೆ ಒಳಗಾದವರು, ವಿಕಲಾಂಗ ಬಾಲಕಿಯರು ಮತ್ತು ಅಪ್ರಾಪ್ತ ವಯಸ್ಕರಿಗೆ ಸಹಾಯಕವಾಗುತ್ತದೆ. ಅಲ್ಲದೇ ಈ ಮಸೂದೆಯಿಂದ ತಾಯಿಯ ಮರಣ ಪ್ರಮಾಣ ಕಡಿಮೆಯಾಗುತ್ತದೆ ಎಂದು ಸಚಿವರು ಹೇಳಿದರು.

ABOUT THE AUTHOR

...view details