ಶ್ರೀನಗರ (ಜಮ್ಮು ಕಾಶ್ಮೀರ):ಕಾಂಗ್ರೆಸ್ ಸರಪಂಚ್ನನ್ನು ಭಯೋತ್ಪಾದಕರು ಕೊಂದ ಹಿನ್ನೆಲೆಯಲ್ಲಿ ಮೊಂಬತ್ತಿ ಹಚ್ಚಿ ಭಾರತೀಯ ಜನತಾ ಯುವ ಮೋರ್ಚಾದ ಕಾರ್ಯಕರ್ತರು ಜಾಥಾ ನಡೆಸಿದ ಘಟನೆ ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ನಡೆದಿದೆ.
ಜೂನ್ 8ರಂದು ಅಜಯ್ ಪಂಡಿತ ಎಂಬ ಸರಪಂಚ್ನನ್ನು ಭಯೋತ್ಪಾದಕರು ಹತ್ಯೆ ಮಾಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಕ್ ಭಯೋತ್ಪಾದಕರು ಸರಪಂಚ್ನನ್ನು ಕೊಂದಿದ್ದು, ನಾವು ಪಾಕ್ ಪ್ರಧಾನಿ ಹಾಗೂ ಭಯೋತ್ಪಾದಕರ ವಿರುದ್ಧ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಭಾರತೀಯ ಜನತಾ ಯುವ ಮೋರ್ಚಾ ಅಧ್ಯಕ್ಷ ಅರುಣ್ ದೇವ್ ಸಿಂಗ್ ಕಿಡಿಕಾರಿದ್ದಾರೆ.
ಭಾನುವಾರ ಅಪರಿಚಿತ ಭಯೋತ್ಪಾದಕರು ಅನಂತ್ನಾಗ್ ಜಿಲ್ಲೆಯ ಲೋಕ್ಭವನ್ ಬಳಿ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಗಾಯಗೊಂಡಿದ್ದ ಸರಪಂಚ್ ಅಜಯ್ ಪಂಡಿತ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದು, ಭಾರತೀಯ ಜನತಾ ಯುವ ಮೋರ್ಚಾದಿಂದ ಪ್ರತಿಭಟನೆಗಳು ನಡೆಯುತ್ತಿವೆ.