ಕರ್ನಾಟಕ

karnataka

ETV Bharat / bharat

ಡಿವೈಡರ್​ಗೆ ಡಿಕ್ಕಿ ಹೊಡೆದು ಬೈಕ್​ ಸವಾರ ಸಾವು: ರಸ್ತೆ ದುರಸ್ತಿ ಮಾಡದಿದ್ದಕ್ಕೆ ಎನ್​ಹೆಚ್​ಎಐ ವಿರುದ್ಧ ದೂರು - ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರಕರಣ ದಾಖಲು

ರಸ್ತೆ ದುರಸ್ತಿ ಮಾಡದಿದ್ದಕ್ಕೆ ಅಪಘಾತ ಸಂಭವಿಸಿ ಬೈಕ್​​ ಸವಾರ ಸಾವಿಗೀಡಾಗಿದ್ದಾನೆ ಎಂದು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

Case against NHAI
ರಸ್ತೆ ದುರಸ್ತಿ ಮಾಡದಿದ್ದಕ್ಕೆ ಎನ್​ಹೆಚ್​ಎಐ ವಿರುದ್ಧ ದೂರು

By

Published : Jun 15, 2020, 3:24 PM IST

ಮುಜಫರ್​ನಗರ(ಉತ್ತರ ಪ್ರದೇಶ):ಹದಗೆಟ್ಟ ರಸ್ತೆಯಲ್ಲಿ ಸಂಭವಿಸಿದ ಅಪಘಾತದಿಂದ ಬೈಕ್​ ಸವಾರ ಮೃತಪಟ್ಟಿದ್ದು, ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾನುವಾರ ರಾತ್ರಿ ಇಬ್ಬರು ಸಹೋದರರು ಬೈಕ್​ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬೈಕ್​ ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವಿಗೀಡಾಗಿದ್ದಾನೆ. ಇನ್ನೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ರಸ್ತೆಯಲ್ಲಿ ಹಲವು ಗುಂಡಿಗಳಿದ್ದು, ದುರಸ್ತಿ ಮಾಡದ ಕಾರಣ ಅಪಘಾತ ಸಂಭವಿಸಿದೆ ಎಂದು ಮೃತನ ಸಂಬಂಧಿಕರು ಆರೋಪಿಸಿದ್ದಾರೆ. ದೂರಿನ ಮೇರೆಗೆ ರಸ್ತೆ ದುರಸ್ತಿ ಮಾಡದಿದ್ದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ABOUT THE AUTHOR

...view details