ಕೇರಳ/ಕೊಚ್ಚಿ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ರಿಯಾಲಿಟಿ ಶೋದ ನಟರೊಬ್ಬರ ಸ್ವಾಗತಕ್ಕೆ ಅದ್ಧೂರಿ ಸಮಾರಂಭ ಏರ್ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 79 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಏರ್ಪೋರ್ಟ್ನಲ್ಲಿ ಅದ್ಧೂರಿ ಸ್ವಾಗತ ಸಮಾರಂಭ ಏರ್ಪಡಿಸಿದವರ ವಿರುದ್ಧ ಎಫ್ಐಆರ್ ಕೊರೊನಾ ವೈರಸ್ ಹರಡುವ ಭೀತಿಯಲ್ಲಿ ಎಲ್ಲ ರೀತಿಯ ಸಾಮೂಹಿಕ ಸಮಾರಂಭಗಳನ್ನು ಕೇರಳ ಸರ್ಕಾರ ನಿಷೇಧಿಸಿದೆ. ಆದರೂ ಇಂಥದೊಂದು ಅದ್ಧೂರಿ ಸಾಮೂಹಿಕ ಸಮಾರಂಭವನ್ನು ಭಾನುವಾರ ವಿಮಾನ ನಿಲ್ದಾಣದಲ್ಲಿ ಏರ್ಪಡಿಸಲಾಗಿತ್ತು ಎನ್ನಲಾಗ್ತಿದೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಸರ್ಕಾರ ವಿಧಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಪೊಲೀಸರು ಐಪಿಸಿ ಸೆಕ್ಷನ್ 143, 147, 149, 188 ಮತ್ತು 283 ಗಳಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಮಾನ ನಿಲ್ದಾಣದ 500 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಮೆರವಣಿಗೆ ಮಾಡುವಂತಿಲ್ಲ ಎಂಬ ಹೈಕೋರ್ಟ್ ಆದೇಶವನ್ನು ಸಹ ಉಲ್ಲಂಘಿಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಯುನೈಟೆಡ್ ಕಿಂಗಡಂ ನಾಗರಿಕ ಸೇರಿದಂತೆ ಇಬ್ಬರು ಕೊರೊನಾ ವೈರಸ್ನಿಂದ ಹೊಸದಾಗಿ ಭಾನುವಾರ ಬಾಧಿತರಾಗಿದ್ದು, ರಾಜ್ಯದಲ್ಲಿ ಒಟ್ಟಾರೆ ಕೊರೊನಾ ವೈರಸ್ ಪೀಡಿತರ ಸಂಖ್ಯೆ 21 ಕ್ಕೆ ಏರಿದೆ.