ಕರ್ನಾಟಕ

karnataka

ರಾಜ್ಯಕ್ಕೆ ಕಾವೇರಿ ರಿಲೀಫ್​... ಮಳೆಯಾದರೆ ಮಾತ್ರ ತಮಿಳುನಾಡಿಗೆ ನೀರು

By

Published : Jun 25, 2019, 10:38 PM IST

ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಬೀಳುವ ಮಳೆ ಹಾಗೂ ಜಲಾಶಯದಲ್ಲಿ ನೀರಿನ ಸಂಗ್ರಹ ಆಧಾರಿಸಿ ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಪ್ರಾಧಿಕಾರ ಕೇಳಿಕೊಂಡಿದೆ. ದೆಹಲಿಯಲ್ಲಿ ಇಂದು ನಡೆದ ಕಾವೇರು ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ.

ಕಾವೇರು ನೀರು ನಿರ್ವಹಣೆ ಪ್ರಾಧಿಕಾರದ ಸಭೆ

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಜೂನ್​ ಮತ್ತು ಜುಲೈ ತಿಂಗಳ ಪಾಲಿನ 40.43 ಟಿಎಂಸಿ ನೀರನ್ನು ಮಳೆಯಾದರೇ ಮಾತ್ರ ತಮಿಳುನಾಡಿಗೆ ಹರಿಸುವಂತೆ ಹೇಳಿದೆ.

ದೆಹಲಿಯಲ್ಲಿ ಇಂದು ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಈ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಬೀಳುವ ಮಳೆ ಹಾಗೂ ಜಲಾಶಯದಲ್ಲಿ ನೀರಿನ ಸಂಗ್ರಹ ಆಧಾರಿಸಿ ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕ್ಕೆ ಪ್ರಾಧಿಕಾರ ಕೇಳಿಕೊಂಡಿದೆ.

ಕಾವೇರು ನೀರು ನಿರ್ವಹಣೆ ಪ್ರಾಧಿಕಾರದ ಸಭೆ

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಮಸೂದ್ ಹುಸೇನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ಹಾಗೂ ಕೇಂದ್ರ ಸರ್ಕಾರದ ಪ್ರತಿನಿಧಿಗಳು ಭಾಗವಹಿಸಿದ್ದರು. ಮೆಟ್ಟೂರು ಅಣೆಕಟ್ಟೆಯಿಂದ ಈವರೆಗೂ ನೀರು ಬಿಟ್ಟಿಲ್ಲ. ತಮ್ಮ ಪಾಲಿನ ನೀರನ್ನು ತಮಿಳುನಾಡಿಗೆ ಹರಿಸಿಲ್ಲ. ಮೆಟ್ಟೂರು ಡ್ಯಾಂನಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದೆ. ತಮಿಳುನಾಡಿನ ರೈತರಿಗೆ ಕಾವೇರಿ ನೀರೇ ಆಸರೆ. ಕುರುವೈ ಬೆಳೆಗಾಗಿ ಮೆಟ್ಟೂರು ಆಣೆಕಟ್ಟನ್ನು ಅವಲಂಬಿಸಲಾಗಿದೆ. ಕಳೆದ ಸಭೆಯಲ್ಲಿ 9.19 ಟಿಎಂಸಿ ಹರಿಸಲು ಸೂಚನೆ ನೀಡಲಾಗಿತ್ತು. ಆದರೆ, ಕರ್ನಾಟಕ ಪ್ರಾಧಿಕಾರದ ಸೂಚನೆಯನ್ನು ಪಾಲಿಸಿಲ್ಲ ಎಂದು ತಮಿಳುನಾಡು ವಾದ ಮಂಡನೆ ಮಾಡಿತ್ತು.

ಕಾವೇರಿ ಜಲ ವಿವಾದ ನ್ಯಾಯಮಂಡಳಿ ನಿಗದಿಪಡಿಸಿದ ಮಾಸಿಕ ವೇಳಾಪಟ್ಟಿಯ ಅನ್ವಯ, ಬಿಳಿಗುಂಡ್ಲು ಜಲಾಶಯ ಮುಖೇನ ಕರ್ನಾಟಕ ಬಿಡುಗಡೆ ಮಾಡಬೇಕಾದ ಪ್ರಮಾಣವು ಜೂನ್ ಮತ್ತು ಜುಲೈನಲ್ಲಿ ಕ್ರಮವಾಗಿ 9.19 ಟಿಎಂಸಿ ಮತ್ತು 31.24 ಟಿಎಂಸಿ ಹರಿಸಬೇಕಿತ್ತು. ಆದರೆ, ರಾಜ್ಯದಲ್ಲಿ ಮಳೆಯ ಪ್ರಮಾಣ ಸಂಪೂರ್ಣವಾಗಿ ಕುಸಿದಿದೆ. ಕೆಆರ್​ಎಸ್​ ಜಲಾಶಯದ ಹಿನ್ನೀರಿನ ಮಟ್ಟದಲ್ಲೂ ತೀವ್ರ ಇಳಿಕೆಯಾಗಿದೆ. ಹೀಗಾಗಿ, ಪ್ರಾಧಿಕಾರದ ಈ ನಡೆ ರಾಜ್ಯದ ಪಾಲಿಗೆ ಬಿಗ್ ರಿಲೀಫ್ ಆಗಿದೆ.

For All Latest Updates

TAGGED:

ABOUT THE AUTHOR

...view details