ನವದೆಹಲಿ:10 ಮತ್ತು 12 ನೇ ತರಗತಿ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15 ರೊಳಗೆ ಘೋಷಿಸಲಾಗುವುದು ಎಂದು ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (CBSE) ಶುಕ್ರವಾರ ತಿಳಿಸಿದೆ.
ಜುಲೈ 15 ರೊಳಗೆ ಸಿಬಿಎಸ್‌ಇ ಪರೀಕ್ಷೆ ಫಲಿತಾಂಶ ಪ್ರಕಟ - ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶ
ಕೊರೊನಾ ಅವಾಂತರದಿಂದಾಗಿ ಸಿಬಿಎಸ್ಸಿ 10 ಮತ್ತು 12 ನೇ ತರಗತಿಯ ಬಾಕಿ ಉಳಿದಿದ್ದ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಆ ಮುಂಚೆ ನಡೆದಿದ್ದ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15 ರೊಳಗೆ ಘೋಷಿಸುತ್ತೇವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ನ ಪರೀಕ್ಷಾ ನಿಯಂತ್ರಕ ಸನ್ಯಂ ಭಾರದ್ವಾಜ್ ತಿಳಿಸಿದ್ದಾರೆ.
ಸಿಬಿಎಸ್‌ಇ
ಕೋವಿಡ್ -19 ಸೃಷ್ಟಿಸಿದ ಬಿಕ್ಕಟ್ಟಿನ ಪರಿಸ್ಥಿತಿಯಿಂದಾಗಿ ಬಾಕಿ ಉಳಿದಿದ್ದ ಎಲ್ಲ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಆ ಮುಂಚೆ ನಡೆದಿದ್ದ ಪರೀಕ್ಷೆಗಳ ಫಲಿತಾಂಶವನ್ನು ಜುಲೈ 15 ರೊಳಗೆ ಘೋಷಿಸುತ್ತೇವೆ ಎಂದು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ನ ಪರೀಕ್ಷಾ ನಿಯಂತ್ರಕ ಸನ್ಯಂ ಭಾರದ್ವಾಜ್ ತಿಳಿಸಿದ್ದಾರೆ.
ಪರ್ಯಾಯ ಮೌಲ್ಯಮಾಪನ ಯೋಜನೆಯ ಮೂಲಕ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಭಾರದ್ವಾಜ್ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.