ನವದೆಹಲಿ:ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ (CBSE)ಯು ಇಂದು 10ನೇ ತರಗತಿ ಫಲಿತಾಂಶವನ್ನು ಪ್ರಕಟಿಸಲಿದೆ.
ಇಂದು CBSE 10ನೇ ತರಗತಿ ಫಲಿತಾಂಶ - ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ ಫಲಿತಾಂಶ
ಇಂದು ಫಲಿತಾಂಶ ಪ್ರಕಟಗೊಳ್ಳುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ನಿನ್ನೆ ಟ್ವೀಟ್ ಮಾಡಿ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
ಕೇಂದ್ರ ಮಾಧ್ಯಮಿಕ ಶಿಕ್ಷಣ ಮಂಡಳಿ
ಮಂಡಳಿಯು ಕಳೆದ ಸೋಮವಾರ 12ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿತ್ತು. ಇಂದು ಫಲಿತಾಂಶ ಪ್ರಕಟಗೊಳ್ಳುವ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ ನಿಶಾಂಕ್ ನಿನ್ನೆ ಟ್ವೀಟ್ ಮಾಡಿ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
"ನನ್ನ ಪ್ರೀತಿಯ ಮಕ್ಕಳೇ, ಪೋಷಕರೇ ಮತ್ತು ಶಿಕ್ಷಕರೇ, ಹತ್ತನೇ ತರಗತಿಯ ಸಿಬಿಎಸ್‌ಇ ಪರೀಕ್ಷೆಗಳ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು. ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.