ಕರ್ನಾಟಕ

karnataka

ETV Bharat / bharat

ಲಾಕ್​ಡೌನ್​ ಮುಗಿದ ತಕ್ಷಣವೇ ಸಿಬಿಎಸ್​ಇ ಪರೀಕ್ಷೆ: ಕೇಂದ್ರ ಸರ್ಕಾರದ ಸ್ಪಷ್ಟನೆ - ಕೇಂದ್ರ ಮಾನವ ಸಂಪನ್ಮೂಲ

ದೇಶದಲ್ಲಿ ಹೇರಿಕೆ ಮಾಡಲಾಗಿರುವ ಲಾಕ್​ಡೌನ್​ ಮುಕ್ತಾಯಗೊಳ್ಳುತ್ತಿದ್ದಂತೆ ಸಿಬಿಎಸ್​ಇ ಪರೀಕ್ಷೆ ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮಾಹಿತಿ ನೀಡಿದೆ.

CBSE to conduct remaining board examinations after lockdown
CBSE to conduct remaining board examinations after lockdown

By

Published : Apr 29, 2020, 8:03 PM IST

ನವದೆಹಲಿ: ಮಾರ್ಚ್ 19 ರಿಂದ 31ರವರೆಗೆ ನಡೆಯಬೇಕಿದ್ದ 10 ಮತ್ತು 12ನೇ ತರಗತಿಯ ಸಿಬಿಎಸ್​​ಇ ಪರೀಕ್ಷೆಗಳು ಕೋವಿಡ್​-19 ಕಾರಣದಿಂದ ಮುಂದೂಡಲ್ಪಟ್ಟಿದ್ದು, ಲಾಕ್​ಡೌನ್​ ಮುಗಿಯುತ್ತಿದ್ದಂತೆ ಪರೀಕ್ಷೆ ನಡೆಸುವುದಾಗಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮಾಹಿತಿ ನೀಡಿದೆ.

10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ನಡೆಸಲಾಗಿದ್ದ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಮುಂದಿನ ತರಗತಿಗಳಿಗೆ ತೇರ್ಗಡೆ ಮಾಡಲಾಗುವುದು ಎಂಬ ವದಂತಿ ಎಲ್ಲೆಡೆ ಹಬ್ಬುತ್ತಿದ್ದಂತೆ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ.

ಸಿಬಿಎಸ್​ಇ 29 ವಿಷಯಗಳ ಪರೀಕ್ಷೆ ನಡೆಸಬೇಕಾಗಿದ್ದು, ಲಾಕ್​ಡೌನ್​ ಮುಗಿಯುತ್ತಿದ್ದಂತೆ ಇವುಗಳನ್ನ ನಡೆಸಲು ನಿರ್ಧರಿಸಲಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಲಾಕ್​ಡೌನ್​ ಮುಗಿದ ತಕ್ಷಣವೇ ಸಿಬಿಎಸ್​ಇ ಪರೀಕ್ಷೆ

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೊಖ್ರಿಯಾಲ್‌ ನಿಶಾಂಕ್​, ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಎಲ್ಲ ರಾಜ್ಯದ ಶಿಕ್ಷಣ ಸಚಿವರೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿ ಮಾಹಿತಿ ಪಡೆದುಕೊಳ್ಳಲಾಗಿದೆ. ಈ ವೇಳೆ, ಕೆಲವೊಂದು ಮಹತ್ವದ ವಿಚಾರ ಹಂಚಿಕೊಂಡಿದ್ದಾರೆ. ಲಾಕ್​ಡೌನ್​ ಮುಗಿದ ತಕ್ಷಣವೇ ಪರೀಕ್ಷೆ ನಡೆಸುವುದು ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.

ABOUT THE AUTHOR

...view details