ಕರ್ನಾಟಕ

karnataka

By

Published : May 25, 2020, 3:53 PM IST

ETV Bharat / bharat

10, 12ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ಜುಲೈನಲ್ಲಿ ನಡೆಸಲು CBSE ನಿರ್ಧಾರ

15,000 ಕೇಂದ್ರಗಳಲ್ಲಿ ಜುಲೈ 1ರಿಂದ 15ರವರೆಗೆ ಲಾಕ್​ಡೌನ್​ನಿಂದಾಗಿ ಮುಂದೂಡಿಕೆಯಾಗಿದ್ದ 10 ಹಾಗೂ 12ನೇ ತರಗತಿಯ ಬಾಕಿ ಇರುವ ಬೋರ್ಡ್ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.

CBSE
ರಮೇಶ್ ಪೋಖ್ರಿಯಾಲ್ ನಿಶಾಂಕ್

ನವದೆಹಲಿ: ಕೊರೊನಾ ಲಾಕ್​ಡೌನ್​ನಿಂದಾಗಿ ಮುಂದೂಡಿಕೆಯಾಗಿದ್ದ 10 ಹಾಗೂ 12ನೇ ತರಗತಿಯ ಬಾಕಿ ಇರುವ ಬೋರ್ಡ್ ಪರೀಕ್ಷೆಗಳನ್ನು ಜುಲೈ 1ರಿಂದ 15ರವರೆಗೆ ನಡೆಸಲಾಗುವುದು ಎಂದು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್​​ಇ) ತಿಳಿಸಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳಾದ ಜೆಇಇ ಮುಖ್ಯ ಪರೀಕ್ಷೆಗಳು ಜುಲೈ 18ರಿಂದ 23 ಹಾಗೂ ಜುಲೈ 26ರಂದು ನೀಟ್​ ಪರೀಕ್ಷೆ ನಡೆಯಲಿದ್ದು, ಇದಕ್ಕೂ ಮೊದಲೇ ಬೋರ್ಡ್ ಪರೀಕ್ಷೆಗಳನ್ನು ಮುಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಹಿಂದೆ 3,000 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿತ್ತು. ಆದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಸಲುವಾಗಿ ಇದೀಗ 15,000 ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಮಾಹಿತಿ ನೀಡಿದ್ದಾರೆ.

12ನೇ ತರಗತಿಯ ಬೋರ್ಡ್​ ಪರೀಕ್ಷೆಗಳು ದೇಶಾದ್ಯಂತ ನಡೆಯಲಿದೆ. ಆದರೆ 10ನೇ ತರಗತಿಯ ಪರೀಕ್ಷೆಗಳು ಈಶಾನ್ಯ ದೆಹಲಿಯಲ್ಲಿ ಮಾತ್ರ ಬಾಕಿ ಉಳಿದಿವೆ. ಪೌರತ್ವ ಕಾಯ್ದೆ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಗಳಿಂದಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷೆಗಳು ಸ್ಥಗಿತಗೊಂಡಿದ್ದವು.

ಕಂಟೇನ್ಮೆಂಟ್​ ಝೋನ್​ಗಳಲ್ಲಿ ಪರೀಕ್ಷೆಗಳನ್ನು ನಡೆಸುವಂತಿಲ್ಲ ಹಾಗೂ ಆಯಾ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ತಲುಪಿಸುವ ಸಾರಿಗೆ ವ್ಯವಸ್ಥೆಯನ್ನು ರಾಜ್ಯ ಸರ್ಕಾರಗಳು ಮಾಡಬೇಕು ಎಂದು ಈಗಾಗಲೇ ಕೇಂದ್ರ ಗೃಹ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸೂಚಿಸಲಾಗಿದೆ.

ABOUT THE AUTHOR

...view details