ನವದೆಹಲಿ: ಕೋವಿಡ್-19 ಸೋಂಕಿತರ ತುರ್ತು ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಔಷಧಿ ನೀಡಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ಕೊರೊನಾ ಸೋಂಕಿತರ ತುರ್ತು ಚಿಕಿತ್ಸೆಗೆ ರೆಮ್ಡೆಸಿವಿರ್ ಔಷಧಿ ನೀಡಲು ಅನುಮತಿ; ಕೇಂದ್ರ ಆರೋಗ್ಯ ಸಚಿವಾಲಯ
ಕೊರೊನಾ ಸೋಂಕಿತರ ತುರ್ತು ಚಿಕಿತ್ಸೆಗಾಗಿ ರೆಮ್ಡೆಸಿವಿರ್ ಔಷಧಿ ನೀಡಲು CDCSO ಅನುಮತಿ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್‌ವಾಲ್, ಸೆಂಟ್ರಲ್ ಡ್ರಗ್ ಕಂಟ್ರೋಲ್ ಸ್ಟ್ಯಾಂಡರ್ಡ್ ಆರ್ಗನೈಸೇಷನ್ (CDCSO) ಕೋವಿಡ್-19 ರೋಗಿಗಳ ತುರ್ತು ಚಿಕಿತ್ಸೆಗೆ ರೆಮ್ಡೆಸಿವಿರ್ ಔಷಧಿ ನೀಡಲು ಅನುಮತಿ ನೀಡಿದೆ ಎಂದು ಹೇಳಿದ್ದಾರೆ.
ಪ್ರೋಟೊಕಾಲ್, ಇದು ಏನು ಮಾಡುತ್ತದೆ ಎಂಬುದರ ಬಗ್ಗೆ ಸದ್ಯಕ್ಕೆ ನಮ್ಮ ಬಳಿ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಅಲಭ್ಯವಿರುವ ಮಾಹಿತಿಯ ಆಧಾರದ ಮೇಲೆ ಅನುಮತಿ ನೀಡಲಾಗಿದೆ ಎಂದಿದ್ದಾರೆ. ಸದ್ಯ ಈ ಔಷಧಿ ಇಂಜೆಕ್ಷನ್ ರೂಪದಲ್ಲಿ ಮಾತ್ರ ಲಭ್ಯವಿದ್ದು, ವೈದ್ಯರ ಸಲಹೆ ಮೇರೆಗೆ ಮಾತ್ರ ಬಳಕೆ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.