ನವದೆಹಲಿ: ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ನಾನಾ ಕಸರತ್ತುಗಳನ್ನು ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತಮ್ಮ ನಿವಾಸದಲ್ಲಿ ಪಕ್ಷದ ಸಿಇಸಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ.
ಮೊದಲ ಹಂತದ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಚರ್ಚೆ ನಡೆದಿದ್ದು, ಮುಂದಿನ ದಿನಗಳಲ್ಲಿ ಎರಡು ಹಾಗೂ ಮೂರನೇ ಹಂತದ ಚುನಾವಣೆಗಳ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದಕ್ಕೂ ಮೊದಲು ಸಿಇಸಿ ಸಭೆ ಅಕ್ಟೋಬರ್ 5ರಂದು ನಡೆದಿದ್ದು, ಇದಾದ ನಂತರ ಅಕ್ಟೋಬರ್ 7ರಂದು 21 ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿತ್ತು. ಇದು ಪಕ್ಷದೊಳಗೆ ಸ್ವಲ್ಪ ಮಟ್ಟದ ಅಸಮಾಧಾನ ಕೂಡಾ ವ್ಯಕ್ತವಾಗಿತ್ತು.