ಬಾಗಪತ್ (ಉತ್ತರ ಪ್ರದೇಶ):ಇತ್ತೀಚೆಗೆ ಕೆಲ ರೌಡಿಗಳು ಲಾಂಗ್ಗಳಿಂದ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿರುವುದನ್ನ ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ತನ್ನ ಬರ್ತ್ ಡೇ ಕೇಕ್ ಗೆ ನೇರವಾಗಿ ಶೂಟ್ ಮಾಡಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾನೆ.
ಉತ್ತರ ಪ್ರದೇಶದ ಬಾಗಪತ್ ಜಿಲ್ಲೆಯ ಸರೂರ್ಪುರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಬೆಳಕಿಗೆ ಬಂದಿದೆ.