ಮುಂಬೈ (ಮಹಾರಾಷ್ಟ್ರ):ಮುಂಬೈ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕಾಂಜುರ್ಮಾರ್ಗ್‌ನಲ್ಲಿ ಮೆಟ್ರೋ ಕಾರ್ ಶೆಡ್ ಅಭಿವೃದ್ಧಿಪಡಿಸುವುದನ್ನು ತಡೆಯುವಂತೆ ಕೇಂದ್ರ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಹೇಳಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಕಂಜುರ್ಮಾರ್ಗ್ ಪ್ರದೇಶದಲ್ಲಿ ಉದ್ದೇಶಿತ ಮೆಟ್ರೋ ಕಾರ್ ಶೆಡ್ ನಿರ್ಮಾಣವನ್ನು ನಿಲ್ಲಿಸುವಂತೆ ಹೇಳಿ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರದ ಉತ್ತೇಜನ ಇಲಾಖೆ ಮಹಾರಾಷ್ಟ್ರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.