ನವದೆಹಲಿ:ಅಯೋಧ್ಯೆ ಭೂವಿವಾದ ಕುರಿತ ತೀರ್ಪು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿದೆ.
ಇದೇ ನವೆಂಬರ್ 17ರ ಒಳಗಾಗಿ ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ಭೂವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಿಂದ ತೀರ್ಪು ಹೊರಬೀಳುವ ಸಾಧ್ಯತೆಯಿದೆ. ಇದು ತೀರಾ ಸೂಕ್ಷ್ಮ ವಿಚಾರವಾಗಿದ್ದು, ಹೀಗಾಗಿ ಪ್ರತಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲೂ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆ ಸೂಚನೆ ನೀಡಿದೆ.