ನವದೆಹಲಿ:ಖಂಡನೆಗೆ ಒಳಗಾಗಿರುವ ನಿರ್ಭಯಾ ಅತ್ಯಾಚಾರಿ ಅಪರಾಧಿಗಳಿಗೆ ಮರಣದಂಡನೆ ವಿಧಿಸಲು ಏಳು ದಿನಗಳ ಗಡುವು ನೀಡುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿ ಅರ್ಜಿ ಸಲ್ಲಿಸಿದೆ.
2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾದವರ ಮರುಪರಿಶೀಲನಾ ಅರ್ಜಿ ವಜಾಗೊಂಡ ವಾರದೊಳಗೆ ಪರಿಹಾರಾತ್ಮಕ ಅರ್ಜಿ ಸಲ್ಲಿಸಲು ವಾಯ್ದೆ ನೀಡುವಂತೆ ಸಪ್ರೀಂಗೆ ಗೃಹ ಸಚಿವಾಯಲ ಮನವಿ ಮಾಡಿದೆ.
ಮರಣದಂಡನೆ ಗುರಿಯಾದವರನ್ನು ಕ್ಷಮಾದಾನ ಅರ್ಜಿ ಸಲ್ಲಿಸಲು ಬಯಸುವುದಾರೆ, ಶಿಕ್ಷೆ ಜಾರಿಯಾದ ದಿನಾಂಕದಿಂದ ಏಳು ದಿನಗಳ ಒಳಗಾಗಿ ಅರ್ಜಿಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಒಂದು ವೇಳೆ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡರೇ ಆ ದಿನದಿಂದ ಏಳು ದಿನಗಳ ಒಳಗೆ ಸಂಬಂಧಪಟ್ಟ ನ್ಯಾಯಾಲಯ, ರಾಜ್ಯ ಸರ್ಕಾರ, ಕಾರಾಗೃಹ ಅಧಿಕಾರಿಗಳು ಕಡ್ಡಾಯವಾಗಿ ಮರಣದಂಡನೆ ವಾರಂಟ್ ಜಾರಿಗೊಳಿಸಬೇಕು ಎಂದು ಕೋರಿದೆ.
ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಅಪರಾಧಿಗಳಾದ ವಿನಯ್ ಶರ್ಮಾ (26), ಅಕ್ಷಯ್ ಕುಮಾರ್ ಸಿಂಗ್ (31), ಮುಖೇಶ್ ಕುಮಾರ್ ಸಿಂಗ್ (32) ಹಾಗೂ ಪವನ್ (26) ಅವರಿಗೆ ದೆಹಲಿ ಹೈಕೋರ್ಟ್ ಜನವರಿ 22ಕ್ಕೆ ಗಲ್ಲು ಶಿಕ್ಷೆ ದಿನಾಂಕ ನಿಗದಿಪಡಿಸಿತ್ತು.
ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆಗೊಳಗಾದವರ ಮನವಿಯನ್ನು ಉನ್ನತ ನ್ಯಾಯಾಲಯ ಜನವರಿ 20ರಂದು ತಿರಸ್ಕರಿಸಿತು. ಅಪರಾಧದ ಸಮಯದಲ್ಲಿ ಬಾಲಾಪರಾಧಿ ಎಂಬ ಅವರ ಹೇಳಿಕೆಯನ್ನು ತಳ್ಳಿಹಾಕಿತು. ದೆಹಲಿ ಹೈಕೋರ್ಟ್ ಇತ್ತೀಚೆಗಷ್ಟೆ ಹೊಸದಾಗಿ ಮರಣದಂಡನೆ ವಾರೆಂಟ್ ಜಾರಿಗೊಳಿಸಿ ಫೆಬ್ರವರಿ 1ಕ್ಕೆ ಗಲ್ಲು ಶಿಕ್ಷೆ ನಿಗದಿಪಡಿಸಿತು.