ನವದೆಹಲಿ: ವಲಸೆ ಕಾರ್ಮಿಕರಿಗೆ ಆಯಾ ರಾಜ್ಯಗಳಲ್ಲೇ ಉದ್ಯೋಗ ನೀಡಬೇಕು. ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದಾರೆ.
ವಲಸೆ ಕಾರ್ಮಿಕರು, ಸಣ್ಣ ವ್ಯಾಪಾರಸ್ಥರ ಸಂಕಷ್ಟ ಬಗೆಹರಿಸಿ: ಕೇಂದ್ರ-ರಾಜ್ಯ ಸರ್ಕಾರಗಳಿಗೆ ಮಾಯಾವತಿ ಒತ್ತಾಯ - ಸಣ್ಣ ಹಾಗೂ ಮಧ್ಯಮ ವರ್ಗದ ಉದ್ಯಮ
ಕೊರೊನಾ ಲಾಕ್ಡೌನ್ನಿಂದಾಗಿ ದೇಶಾದ್ಯಂತ ಸಣ್ಣ ಹಾಗೂ ಮಧ್ಯಮ ವರ್ಗದ ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿವೆ. ತಮ್ಮ ತಮ್ಮ ರಾಜ್ಯಗಳಿಗೆ ಮರಳಿದ ವಲಸೆ ಕಾರ್ಮಿಕರ ಸ್ಥಿತಿ ಹೇಳತೀರದ್ದಾಗಿದೆ. ಇವರ ಸಮಸ್ಯೆಗಳನ್ನು ಬಗೆಹರಿಸುವ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಬೇಕು ಎಂದು ಮಾಯಾವತಿ ಹೇಳಿದ್ದಾರೆ.
ಕೊರೊನಾ ಲಾಕ್ಡೌನ್ನಿಂದಾಗಿ ದೇಶಾದ್ಯಂತ ಸಣ್ಣ ಹಾಗೂ ಮಧ್ಯಮ ವರ್ಗದ ವ್ಯಾಪಾರ ಚಟುವಟಿಕೆಗಳು ಸ್ಥಗಿತಗೊಂಡಿವೆ. ಕೋಟ್ಯಂತರ ಜನರಿಗೆ ಉದ್ಯೋಗ ನೀಡಿರುವ ವ್ಯಾಪಾರಿಗಳೇ ಈಗ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರ ದೇಶದಲ್ಲಿ ಹೊಸ ಉದ್ಯಮ ಹಾಗೂ ಕೈಗಾರಿಕೆಗಳನ್ನು ಆರಂಭಿಸುವ ಯೋಚನೆ ಮಾಡುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ. ಈಗಾಗಲೇ ಸ್ಥಾಪಿಸಿ ಸ್ಥಗಿತಗೊಂಡಿರುವ ಉದ್ಯಮಗಳನ್ನು ನಡೆಸಲು ಪರಿಹಾರ ಒದಗಿಸುವ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡಬೇಕು ಎಂದು ಮಾಯಾವತಿ ಹೇಳಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರನ್ನು ಸರಿಯಾಗಿ ನೋಡಿಕೊಳ್ಳದೆ, ಆಹಾರ ಒದಗಿಸದೆ ಅವರು ತಮ್ಮ ತಮ್ಮ ರಾಜ್ಯಗಳಿಗೆ ತೆರಳುವಂತೆ ಮಾಡಿದ್ದ ರಾಜ್ಯಗಳು ಇದೀಗ ಮತ್ತೆ ವಾಪಸ್ ಕರೆಯಿಸಿಕೊಳ್ಳುತ್ತಿವೆ. ಉತ್ತರ ಪ್ರದೇಶದಲ್ಲಂತೂ ವಲಸೆ ಕಾರ್ಮಿಕರ ಸ್ಥಿತಿ ಹೇಳತೀರದ್ದಾಗಿದೆ. ಬಸ್, ರೈಲುಗಳ ಮೂಲಕ ರಾಜ್ಯಕ್ಕೆ ಮರಳಿದ ಸಾವಿರಾರು ಕಾರ್ಮಿಕರ ಹೆಸರನ್ನು ಅವರ ಕೌಶಲ್ಯಗಳ ಆಧಾರದ ಮೇಲೆ ನೋಂದಾಯಿಸಿಕೊಳ್ಳಲಾಗಿದೆ. ಆದರೂ ಒಂದೊತ್ತಿನ ಊಟಕ್ಕೂ ಅವರು ಪರದಾಡುತ್ತಿದ್ದಾರೆ. ವಲಸೆ ಕಾರ್ಮಿಕರಿಗೆ ಆಯಾ ರಾಜ್ಯಗಳಲ್ಲೇ ಉದ್ಯೋಗ ನೀಡಬೇಕು. ಅವರು ಮತ್ತೆ ಬೇರೆಡೆ ಕೆಲಸ ಅರಸಿ ಹೋಗದಂತೆ ಸರ್ಕಾರಗಳು ವ್ಯವಸ್ಥೆ ಮಾಡಬೇಕು ಎಂಬುದು ಬಿಎಸ್ಪಿ ಮುಖ್ಯಸ್ಥೆಯ ಆಗ್ರಹವಾಗಿದೆ.