ಅಮರಾವತಿ(ಆಂಧ್ರ ಪ್ರದೇಶ): ಕೋವಿಡ್ -19 ಬಿಕ್ಕಟ್ಟಿನ ಮಧ್ಯೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಹೊಸ ವೇಳಾಪಟ್ಟಿ ಕುರಿತು ಚರ್ಚಿಸಲು ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಕ್ಕೆ ತೆಲುಗು ದೇಶಂ ಪಕ್ಷದ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಕಳೆದ ತಿಂಗಳು ಆಂಧ್ರ ಪ್ರದೇಶ ರಾಜ್ಯ ಚುನಾವಣಾ ಆಯೋಗ, ಕೊರೊನಾ ಭೀತಿಯಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಆರು ವಾರಗಳವರೆಗೆ ಮುಂದೂಡಿತ್ತು. ಅಲ್ಲದೆ ಚುನಾವಣಾ ದಿನಾಂಕ ಘೋಷಿಸಿದಾಗಿನಿಂದ ಹಿಂಸಾಚಾರದ ಘಟನೆಗಳು ವರದಿಯಾಗುತ್ತಿವೆ. ಆದರೆ ಆಡಳಿತರೂಢ ವೈಎಸ್ಆರ್ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದ ಕ್ರಮವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸುವುದಾಗಿ ಹೇಳಿದೆ.