ಬುಕ್ಸಾರ್(ಬಿಹಾರ್):ಹೈದರಾಬಾದ್ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಮಾಸುವ ಮುನ್ನವೇ ಬಿಹಾರದಲ್ಲೂ ಇಂತಹುದೇ ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಅರೆಬೆಂದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ಮಾಹಿತಿ ಪ್ರಕಾರ ಆಕೆಯನ್ನು ಗುಂಡಿಟ್ಟು ಸಾಯಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರದಲ್ಲಿ ಗುಂಡು ಹೊಡೆಯಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.