ತಮಿಳುನಾಡು: ರಸ್ತೆಗಳಲ್ಲಿ ಹಾಕಲಾದ ಹೋಲ್ಡಿಂಗ್ಸ್ ಮತ್ತು ಫ್ಲೆಕ್ಸ್ ಬ್ಯಾನರ್ಗಳನ್ನು ಚೆನ್ನೈ ಕಾರ್ಪೊರೇಷನ್ ಸಿಬ್ಬಂದಿ ಮುಲಾಜಿಲ್ಲದೆ ತೆರವುಗೊಳಿಸಲು ಮುಂದಾಗಿದ್ದಾರೆ.
ಚೆನ್ನೈನಲ್ಲಿ ಬ್ಯಾನರ್ ಬಿದ್ದು ಯುವತಿ ಸಾವು, ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ

ಹೌದು, ಸೆಪ್ಟೆಂಬರ್ 12 ರಂದು ಚೆನ್ನೈನಲ್ಲಿ ಯುವತಿಯೋರ್ವಳು ಕೆಲಸ ಮುಗಿಸಿ ಸಂಜೆ ವೇಳೆ ಮನೆಗೆ ಹೋಗುತ್ತಿರುವಾಗ ಎಐಎಡಿಎಂಕೆ ಪಕ್ಷದ ಬ್ಯಾನರ್ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಳು. ಈ ಹಿನ್ನೆಲೆ ಇದೀಗ ಎಚ್ಚೆತ್ತುಕೊಂಡ ಅಧಿಕಾರಿಗಳು ಹೋಲ್ಡಿಂಗ್ಸ್ ಮತ್ತು ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸುತ್ತಿದ್ದಾರೆ. ಹಾಗು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಗೋಪಾಲ್ ಎನ್ನುವವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.
ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದೆಂದು ಕಾರ್ಪೊರೇಷನ್ ಅಧಿಕಾರಿಗಳು ಈ ಕಾರ್ಯಕ್ಕೆ ಮುಂದಾಗಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.