ಬೆಮತ್ರಾ(ಛತ್ತೀಸ್ಘಡ್):ಆಘಾತಕಾರಿ ಘಟನೆವೊಂದರಲ್ಲಿ ಛತ್ತೀಸ್ಘಡ್ದ ಬೆಮತ್ರಾ ಜಿಲ್ಲೆಯಲ್ಲಿ ಎಂಟು ವರ್ಷದ ಬಾಲಕಿ ಮೇಲೆ ಕ್ರೂರವಾಗಿ ಅತ್ಯಾಚಾರವೆಸಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಸೆದು ಹೋಗಿರುವ ಘಟನೆ ನಡೆದಿದೆ.
ಘಟನೆಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸ್ಥಳೀಯರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಬಾಲಕಿಯ ವೈದ್ಯಕೀಯ ವರದಿಗಾಗಿ ನಾವು ಕಾಯುತ್ತಿದ್ದು, ತದನಂತರ ಪ್ರಕರಣ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದ್ದಾರೆ.