ರಾಯ್ಪುರ (ಛತ್ತೀಸ್ಗಡ):ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್, ಈಗ ಮುಂಬರುವ ರಾಜ್ಯಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿದೆ.
ಛತ್ತೀಸ್ಘಡದಿಂದ ರಾಜ್ಯಸಭೆಗೆ ಪ್ರಿಯಾಂಕ ಗಾಂಧಿ? - ರಾಜ್ಯಸಭೆಗೆ ಪ್ರಿಯಾಂಕ ಗಾಂಧಿ
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಕಾಂಗ್ರೆಸ್, ಈಗ ಮುಂಬರುವ ರಾಜ್ಯಸಭಾ ಚುನಾವಣೆ ಮೇಲೆ ಕಣ್ಣಿಟ್ಟಿದೆ.
![ಛತ್ತೀಸ್ಘಡದಿಂದ ರಾಜ್ಯಸಭೆಗೆ ಪ್ರಿಯಾಂಕ ಗಾಂಧಿ? Chhattisgarh Congress may nominate Priyanka Gandhi to Rajya sabha](https://etvbharatimages.akamaized.net/etvbharat/prod-images/768-512-6107936-thumbnail-3x2-priyanka.jpg)
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು, ಛತ್ತೀಸ್ಘಡ ಮೇಲ್ಮನೆಯಿಂದ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ರಾಜ್ಯ ಕಾಂಗ್ರೆಸ್ ಘಟಕ ನಿರ್ಧರಿಸಿದೆ ಎಂದು ಇಲ್ಲಿನ ವಸತಿ ಸಚಿವ ಮೊಹಮ್ಮದ್ ಅಕ್ಬರ್ ಹೇಳಿದ್ದಾರೆ.
ಪ್ರಿಯಾಂಕ ಗಾಂಧಿ ಅವರು ರಾಜ್ಯಸಭೆಗೆ ಆಯ್ಕೆಯಾಗುವ ಕುರಿತು ಪ್ರತಿಕ್ರಿಯಿಸಿದ ಅಕ್ಬರ್ ಏಪ್ರಿಲ್ನಲ್ಲಿ ಚುನಾವಣೆ ನಡೆಯಲಿದೆ. ಪ್ರಿಯಾಂಕಾ ಗಾಂಧಿ ಅವರು ಗೆಲ್ಲಲು ರಾಜ್ಯದಲ್ಲಿ ನಮಗೆ ಬಹುಮತವಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಏನು ನಿರ್ಧಾರ ಕೈಗೊಳ್ಳುತ್ತಾರೋ ಗೊತ್ತಿಲ್ಲ ಎಂದು ತಿಳಿಸಿದರು.