ಕರ್ನಾಟಕ

karnataka

ETV Bharat / bharat

ಗುಂಡು ಹಾರಿಸಿಕೊಂಡು ಕರ್ನಾಟಕ ಮೂಲದ ಸಿಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಆತ್ಮಹತ್ಯೆ - ಕೇಂದ್ರೀಯ ಮೀಸಲು ಪೊಲೀಸ್ ಪಡೆ

ಕರ್ನಾಟಕ ಮೂಲದ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಒಬ್ಬರು ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Died
Died

By

Published : Sep 16, 2020, 5:18 PM IST

ಸುಕ್ಮಾ: ಕೇಂದ್ರ ರಿಸರ್ವ್ ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್, ನಕ್ಸಲ್ ಪೀಡಿತ ಸುಕ್ಮಾ ಜಿಲ್ಲೆಯಲ್ಲಿಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) 2 ನೇ ಬೆಟಾಲಿಯನ್‌ಗೆ ಸೇರಿದ ಎಎಸ್‌ಐ ಕೆ. ಶಿವಾನಂದ್ (49) ಅವರು ಎಕೆ -47 ರೈಫಲ್‌ನಿಂದ ಗದಿರಾಸ್ ಪೊಲೀಸ್ ಠಾಣೆ ಆವರಣದಲ್ಲಿರುವ ಶಿಬಿರದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನು ಗುಂಡಿನ ಶಬ್ದ ಕೇಳಿದ ಸಹೋದ್ಯೋಗಿಗಳು ಸ್ಥಳಕ್ಕೆ ಆಗಮಿಸಿ ನೋಡಿದಾಗ ಸಾವನ್ನಪ್ಪಿರುವುದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.

ಶಿವಾನಂದ್ ಕರ್ನಾಟಕ ಮೂಲದವರಾಗಿದ್ದು, ಘಟನೆಯ ಕುರಿತು ಅವರ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ABOUT THE AUTHOR

...view details