ಕರ್ನಾಟಕ

karnataka

ETV Bharat / bharat

ಛತ್ತೀಸ್​ಘಡ ಸಿಎಂ ನಿವಾಸದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಿರುದ್ಯೋಗಿ ಯುವಕ! - ಸಿಎಂ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನ

ನಿರುದ್ಯೋಗಿ ಯುವಕನೊಬ್ಬ ಛತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಅಧಿಕೃತ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

Youth Attempts Self-Immolation Outside CM's House
ಸಿಎಂ ನಿವಾಸದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

By

Published : Jun 29, 2020, 4:09 PM IST

ರಾಯ್‌ಪುರ (ಛತ್ತೀಸ್‌ಘಡ): ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಅವರ ಅಧಿಕೃತ ನಿವಾಸದ ಎದುರು ನಿರುದ್ಯೋಗಿ ಯುವಕನೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಧಮ್ತಾರಿ ಮೂಲದ ಹರ್​ದೇವ್ ಎಂದು ಗುರುತಿಸಲಾಗಿದ್ದ, ಮುಖ್ಯಮಂತ್ರಿಯನ್ನು ಭೇಟಿಯಾಗಲು ಅವಕಾಶ ನಿಡಲು ನಿರಾಕರಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಸಿಎಂ ನಿವಾಸದ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ

ಸಿಎಂ ಮನೆಯ ಹೊರಗೆ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿ ಯುವಕನನ್ನು ರಕ್ಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, 12ನೇ ತರಗತಿ ಓದಿರುವ ಯುವಕ ಹಲವು ತಿಂಗಳಿನಿಂದ ನಿರುದ್ಯೋಗಿಯಾಗಿದ್ದು, ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದ ಎಂದು ತಿಳಿದು ಬಂದಿದೆ.

ABOUT THE AUTHOR

...view details