ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮಾಜಿ ಸಚಿವ ಪಿ. ಚಿದಂಬರಂ ಅವರು ನವದೆಹಲಿಯ ಎಐಸಿಸಿ ಪ್ರಧಾನ ಕಚೇರಿಗೆ ಆಗಮಿಸಿದ್ದಾರೆ.
ಪ್ರಕರಣ ಸಂಬಂಧ ಇನ್ನೆರಡು ಗಂಟೆಯೊಳಗೆ ಹಾಜರಾಗಬೇಕೆಂದು ಸಿಬಿಐ ಅಧಿಕಾರಿಗಳು ಚಿದಂಬರಂ ಅವರ ನಿವಾಸದ ಮುಂದೆ ನೋಟಿಸ್ ಅಂಟಿಸಿದ್ದು, ಇದೀಗ ಅವರು ಪ್ರತ್ಯಕ್ಷವಾಗಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಚಿದಂಬರಂ ಅವರೇ ಕಿಂಗ್ಪಿನ್ ಎಂದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ಬೆನ್ನಿಗೇ ಚಿದಂಬರಂ ಅವರು ನಾಪತ್ತೆಯಾಗಿದ್ದರು.
ಸುಪ್ರೀಂ ಕೋರ್ಟ್ನಲ್ಲಿ ತಮ್ಮ ಜಾಮೀನು ಅರ್ಜಿ ತುರ್ತು ಕೈಗೆತ್ತಿಕೊಳ್ಳಬೇಕೆಂದು ಚಿದಂಬರಂ ಅವರ ಪರ ವಕೀಲರು ಸಲ್ಲಿಸಿದ್ದ ಮನವಿಯೂ ತಿರಸ್ಕೃತಗೊಂಡಿದೆ.