ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂಗೆ ದೆಹಲಿ ಕೋರ್ಟ್ ಜಾಮೀನು ನಿರಾಕರಣೆ ಮಾಡಿದ್ದು, ಹೀಗಾಗಿ ತಿಹಾರ್ ಜೈಲಿನಲ್ಲಿ ಅವರ ವಾಸ ಮುಂದುವರೆಯಲಿದೆ.
ಐಎನ್ಎಕ್ಸ್ ಮೀಡಿಯಾ ಕೇಸ್... 'ಕೈ' ಮಾಜಿ ಸಚಿವ ಚಿದಂಬರಂಗಿಲ್ಲ ಜಾಮೀನು!
ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿರುವ ಕೇಂದ್ರದ ಮಾಜಿ ವಿತ್ತ ಸಚಿವ ಪಿ.ಚಿದಂಬರಂಗೆ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
ಚಿದಂಬರಂಗೆ ಜಾಮೀನು ನೀಡಿದರೆ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚಾಗಿರುತ್ತದೆ ಎಂದು ದೆಹಲಿ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅವರಿಗೆ ಜಾಮೀನು ನೀಡಲು ಹಿಂದೇಟು ಹಾಕಿದೆ.
ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಸಿಬಿಐನಿಂದ ಕೇಂದ್ರದ ಮಾಜಿ ಸಚಿವ ಬಂಧನವಾಗಿದ್ದಾರೆ. ಸೆ.5 ರಿಂದ ನ್ಯಾಯಾಂಗ ಬಂಧನದಲ್ಲಿರುವ 70 ವರ್ಷದ ಪಿ.ಚಿದಂಬರಂ ಅವರನ್ನ ತಿಹಾರ್ ಜೈಲಿನ 7ನೇ ನಂಬರ್ನ ಸೆಲ್ನಲ್ಲಿ ಇರಿಸಲಾಗಿದೆ. ಈಗಾಗಲೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಣೆ ನಡೆಸಿದ್ದರು.