ಕರ್ನಾಟಕ

karnataka

ETV Bharat / bharat

ಅನುದಾನ, ಸಂಪುಟ ವಿಸ್ತರಣೆ ಕುರಿತು ಕೇಂದ್ರ ಸಚಿವರನ್ನು ಭೇಟಿಯಾದ ಸಿಎಂ - ರಕ್ಷಣಾ ಸಚಿವ ರಾಜನಾಥ್ ಸಿಂಗ್

ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವೆ ನಿರ್ಮಲಾ ಸೀತಾರಾಮನ್​ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದರು.

Chief Minister BS Yeddyurappa met Nirmala Sitharaman, Rajanath Singh
ಅನುದಾನಕ್ಕಾಗಿ ನಿರ್ಮಲಾ ಸೀತಾರಾಮನ್, ಸಂಪುಟ ವಿಸ್ತರಣೆ ಮಾತುಕತೆಗೆ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ

By

Published : Sep 17, 2020, 8:49 PM IST

ಬೆಂಗಳೂರು: ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರೆಹಾನಿ ಪರಿಹಾರಕ್ಕೆ ಹೆಚ್ಚಿನ ಅನುದಾನ ಮಂಜೂರು ಮಾಡುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ಗೆ ಮನವಿ ಮಾಡಿದ್ದಾರೆ.

ಅನುದಾನಕ್ಕಾಗಿ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ

ರಾಜ್ಯಕ್ಕೆ ಹೆಚ್ಚಿನ ಅನುದಾನ ಹಾಗೂ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಸಮ್ಮತಿ ಪಡೆಯಲು ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದರು. ರಾಜ್ಯದಲ್ಲಿ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳು, ಯೋಜನೆಗಳ ಅನುಷ್ಠಾನಕ್ಕೆ ಅನುದಾನ ಲಭ್ಯತೆ, ಪ್ರವಾಹದಿಂದ ಆಗಿರುವ ಹಾನಿ, ಪರಿಹಾರ ಕಾಮಗಾರಿಗಳ ವಿವರವನ್ನು ವಿವರಿಸಿ ರಾಜ್ಯಕ್ಕೆ ಅನುದಾನ ನೀಡುವಂತೆ ಪ್ರಸ್ತಾವನೆ ಸಲ್ಲಿಸಿದರು.

ಸಂಪುಟ ವಿಸ್ತರಣೆ ಮಾತುಕತೆಗೆ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯಬಾಸ್ಕರ್ ಉಪಸ್ಥಿತರಿದ್ದರು.

ಸಂಪುಟ ವಿಸ್ತರಣೆ ಮಾತುಕತೆಗೆ ರಾಜನಾಥ್ ಸಿಂಗ್ ಭೇಟಿಯಾದ ಸಿಎಂ
ಹಣಕಾಸು ಸಚಿವರ ಭೇಟಿ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಚರ್ಚೆ ನಡೆಸಿದರು. ಮೈತ್ರಿ ಸರ್ಕಾರ ಪತನದ ನಂತರ ಸರ್ಕಾರ ರಚನೆ, ಉಪ ಚುನಾವಣೆ, ವಲಸಿಗರಿಗೆ ಸಚಿವ ಸ್ಥಾನ ನೀಡಿದ್ದನ್ನು ವಿವರಿಸಿ, ಕೊಟ್ಟ ಮಾತಿನಂತೆ ಈಗ ಸಚಿವ ಸ್ಥಾನ ನೀಡಬೇಕಿರುವ ಅನಿವಾರ್ಯತೆ ಬಗ್ಗೆ ತಿಳಿಸಿ ಸಂಪುಟ ವಿಸ್ತರಣೆ ಮಾಡುವ ಕುರಿತು ಸಮಾಲೋಚನೆ ನಡೆಸಿದರು ಎಂದು ಸಿಎಂ ಆಪ್ತ ಮೂಲಗಳಿಂದ ತಿಳಿದುಬಂದಿದೆ.ಈ ವೇಳೆ ರಾಜ್ಯ ಸರ್ಕಾರದ ದೆಹಲಿ‌ ವಿಶೇಷ ಪ್ರತಿನಿಧಿ ಶಂಕರ್ ಗೌಡ ಪಾಟೀಲ್ ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ABOUT THE AUTHOR

...view details