ಬೀಜಿಂಗ್ (ಚೀನಾ): ಕೊರೊನಾಗೆ ಲಸಿಕೆ ಕಂಡು ಹಿಡಿದರೆ ಅದನ್ನು ಜಾಗತಿಕ ಮಾರುಕಟ್ಟೆಗೆ ನೀಡಲಾಗುತ್ತದೆ ಎಂದು ಚೀನಾದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ವಾಂಗ್ ಝಿಗ್ಯಾಂಗ್ ಸ್ಪಷ್ಟಪಡಿಸಿದ್ದಾರೆ.
ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ವ್ಯಾಕ್ಸಿನ್ ತಯಾರಿಕೆಯಲ್ಲಿ ಚೀನಾ ಪ್ರಯತ್ನಿಸುತ್ತಿದ್ದು, ಅಂತಾರಾಷ್ಟ್ರೀಯ ಸಹಕಾರ ನೀಡುತ್ತಿದೆ ಎಂದರು. ಇದರ ಜೊತೆಗೆ ಕೊರೊನಾ ವೈರಸ್ಗೆ ಚೀನಾ ನಿಯಂತ್ರಿಸಿದ ಬಗ್ಗೆ ಮಾಹಿತಿ ನೀಡಿದರು.