ನವದೆಹಲಿ:ಕೊರೊನಾ ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರಿ ನೌಕರರು, ಆಧಾರ್ ಮೂಲದ ಬಯೋಮೆಟ್ರಿಕ್ ವ್ಯವಸ್ಥೆಯ ಮೂಲಕ ಹಾಜರಾತಿ ಗುರುತಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಕೇಂದ್ರ ನೌಕರರಿಗೆ ಮಾ.31ರವರೆಗೆ ಬಯೋಮೆಟ್ರಿಕ್ನಿಂದ ವಿನಾಯಿತಿ - ಮಾ.31 ವರೆಗೆ ಬಯೋಮೆಟ್ರಿಕ್ನಿಂದ ವಿನಾಯಿತಿ
ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸಿರುವ ಕೇಂದ್ರ ಸರ್ಕಾರ ಎಲ್ಲಾ ನೌಕರರಿಗೂ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಿದೆ.

ಸೋಂಕಿತ ವ್ಯಕ್ತಿ ಅಥವಾ ವಸ್ತುಗಳ ಮೇಲ್ಮೈ ಸ್ಪರ್ಶಿಸುವುದರಿಂದ ಕೊರೊನಾ ವೈರಸ್ ಹರಡುತ್ತದೆ ಎಂದು ತಿಳಿದುಬಂದಿದೆ. ಹೀಗಾಗಿ ಮಾರ್ಚ್ 31 ರವರೆಗೆ ಆಧಾರ್ ಮೂಲದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ನೌಕರರಿಗೆ ವಿನಾಯಿತಿ ನೀಡುವಂತೆ ಕೇಂದ್ರದ ಎಲ್ಲಾ ಇಲಾಖೆಗಳಿಗೆ ತಿಳಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.
ಬಯೋಮೆಟ್ರಿಕ್ ವ್ಯವಸ್ಥೆಯ ಬದಲಾಗಿ ರಿಜಿಸ್ಟ್ರಾರ್ನಲ್ಲಿ ಹಾಜರಾತಿಯನ್ನು ದಾಖಲಿಸಲು ತಿಳಿಸಲಾಗಿದೆ. ದೇಶದಲ್ಲಿ ಕಡಿಮೆ ಸಂಖ್ಯೆಯ ಕೊರೊನಾ ವೈರಸ್ ಪ್ರಕರಣಗಳು ಮಾತ್ರ ವರದಿಯಾಗಿದ್ದರೂ, ಅದರ ಹರಡುವಿಕೆಯನ್ನು ತಡೆಯಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವುದು ಅತ್ಯಗತ್ಯ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.