ನವದೆಹಲಿ: ಪೌರತ್ವ (ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.
ಇನ್ನು ಮುಂದೆ ಈ ಮಸೂದೆ ಕಾಯಿದೆ ರೂಪ ಪಡದುಕೊಂಡಂತಾಗಿದೆ. ಅಧಿಕೃತ ಗೆಜೆಟ್‌ನಲ್ಲಿ ಅಧಿಸೂಚನೆ ಪ್ರಕಟವಾದ ನಂತರ ಕಾಯ್ದೆ ಅಧಿಕೃತವಾಗಿ ಜಾರಿಗೆ ಬರಲಿದೆ.

ಕಾಯಿದೆಯ ಪ್ರಕಾರ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಬಂದು ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿರುವ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರನ್ನು ಅಕ್ರಮ ವಲಸಿಗರೆಂದು ಪರಿಗಣಿಸುವುದಿಲ್ಲ. ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. ಇದು 2014 ರ ಡಿಸೆಂಬರ್ 31 ರ ಒಳಗೆ ಬಂದವರಿಗೆ ಅನ್ವಯಿಸುತ್ತದೆ.
ಈ ಮಸೂದೆಯನ್ನು ರಾಜ್ಯಸಭೆಯು ಬುಧವಾರ ಹಾಗೂ ಲೋಕಸಭೆ ಸೋಮವಾರ ಅಂಗೀಕರಿಸಿತ್ತು.