ನವದೆಹಲಿ:ನಿನ್ನೆ ಲೋಕಸಭೆಯಲ್ಲಿ ಅಂಗೀಕಾರಗೊಂಡ ಪೌರತ್ವ ತಿದ್ದುಪಡಿ ಮಸೂದೆ, ಬುಧವಾರ ಸಂಸತ್ನ ಮೇಲ್ಮನೆಯಲ್ಲಿ ಮಂಡನೆಯಾಗಲಿದೆ.
ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ, ಲೋಕಸಭೆಯಲ್ಲಿ ಮಸೂದೆಯನ್ನು ಮಂಡಿಸಿದ್ದರು. 311 ಮತಗಳ ಮೂಲಕ ಮಸೂದೆ ಸಂಸತ್ತಿನ ಕೆಳಮನೆಯಲ್ಲಿ ಅಂಗೀಕಾರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮಸೂದೆಯನ್ನು ಇಂದು ಮೇಲ್ಮನೆಯಲ್ಲಿ ಮಂಡಿಸಲಾಗುತ್ತದೆ ಎನ್ನಲಾಗಿತ್ತು. ಆದರೆ ಇದೀಗ ಶಾ, ಬುಧವಾರ ರಾಜ್ಯಸಭೆಯಲ್ಲಿ ಮಸೂದೆ ಮಂಡಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಏನಿದು ಪೌರತ್ವ ತಿದ್ದುಪಡಿ ಮಸೂದೆ ?
ಆರು ದಶಕಗಳಷ್ಟು ಹಳೆಯದಾದ ಪೌರತ್ವ ಕಾಯ್ದೆಗೆ ತಿದ್ದುಪಡಿಗಳನ್ನು ತರಲು ಉದ್ದೇಶಿಸಿರುವ ಈ ಮಸೂದೆ ಪ್ರಕಾರ, ಕಿರುಕುಳದಿಂದಾಗಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಹಾಗೂ ಪಾಕಿಸ್ತಾನಗಳಿಂದ 2014 ರೊಳಗಾಗಿ ಬಂದಿರುವ ಹಿಂದೂ, ಸಿಖ್, ಬೌದ್ಧ, ಜೈನ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ನಿರಾಶ್ರಿತರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ ದೇಶದಲ್ಲಿ ಐದು ವರ್ಷಗಳ ಕಾಲ ವಾಸವಾದ ಬಳಿಕ ಅವರಿಗೆ ಭಾರತೀಯ ಪೌರತ್ವ ನೀಡಲಾಗುತ್ತದೆ.
ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ...