ಶ್ರೀನಗರ( ಜಮ್ಮು ಕಾಶ್ಮೀರ): ಶಂಕಿತ ಭಯೋತ್ಪಾದಕರ ಗುಂಡಿನ ದಾಳಿಯಿಂದ ಓರ್ವ ನಾಗರಿಕ ಸಾವನ್ನಪ್ಪಿರುವ ಘಟನೆ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಬೊಮೈ ಪ್ರದೇಶದಲ್ಲಿ ನಡೆದಿದೆ.
ಶಂಕಿತ ಭಯೋತ್ಪಾದಕರ ಗುಂಡಿನ ದಾಳಿಗೆ ಓರ್ವ ನಾಗರಿಕ ಬಲಿ - ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದಕರು
ಶಂಕಿತ ಭಯೋತ್ಪಾದಕರ ದಾಳಿಯಿಂದ ಓರ್ವ ನಾಗರಿಕ ಮೃತಪಟ್ಟಿರುವ ಘಟನೆ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ.
ಭಯೋತ್ಪಾದಕರ ದಾಳಿ
ಇಶ್ಫಾಕ್ ಅಹ್ಮದ್ ನಜರ್ ಗುಂಡಿನ ದಾಳಿಗೊಳಗಾದ ವ್ಯಕ್ತಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಗಂಭೀರ ಗಾಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪೊಲೀಸರು ಈ ಸಂಬಂಧ ತೀವ್ರ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಸೇನೆಯಿಂದ ಭಯೋತ್ಪಾದಕರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.