ಕರ್ನಾಟಕ

karnataka

ETV Bharat / bharat

ಗ್ವಾಲಿಯರ್‌ನಲ್ಲಿ ಬಿಜೆಪಿ-ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಘರ್ಷಣೆ - ಉಭಯ ಪಕ್ಷಗಳ ಕಾರ್ಯಕರ್ತರ ಘರ್ಷಣೆ

ಗ್ವಾಲಿಯರ್​​ನ ದಬ್ರಾದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

clash-breaks-out-between-bjp-and-cong-workers-in-mps-gwalior-case-registered
ಗ್ವಾಲಿಯರ್‌ನಲ್ಲಿ ಬಿಜೆಪಿ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಘರ್ಷಣೆ

By

Published : Oct 26, 2020, 8:45 AM IST

ಗ್ವಾಲಿಯರ್ (ಮಧ್ಯಪ್ರದೇಶ):ಗ್ವಾಲಿಯರ್​​ನ ದಬ್ರಾದಲ್ಲಿ ಭಾನುವಾರ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿರುವ ಸಂಬಂಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ 11.30ರ ಸುಮಾರಿಗೆ ಉಭಯ ಪಕ್ಷಗಳ ಕಾರ್ಯಕರ್ತರು ಉಪ ಚುನಾವಣೆ ಪ್ರಚಾರ ನಡೆಸುತ್ತಿದ್ದಾಗ ಈ ಘಟನೆ ಸಂಭವಿಸಿದೆ.

"ಮೊದಲು ಎರಡೂ ಪಕ್ಷದ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದವಾಗಿದ್ದು, ಅದು ಜಗಳಕ್ಕೆ ತಿರುಗಿದೆ. ನಂತರ ಎರಡೂ ಗುಂಪುಗಳು ಪೊಲೀಸ್ ಠಾಣೆಗೆ ಬಂದು ಘಟನೆ ಸಂಬಂಧ ಪ್ರಕರಣ ದಾಖಲಿಸಿವೆ" ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಉಮೇಶ್ ತೋಮರ್ ಹೇಳಿದ್ದಾರೆ.

ಮಧ್ಯಪ್ರದೇಶದ 28 ವಿಧಾನಸಭಾ ಕ್ಷೇತ್ರಗಳ ಚುನಾಣೆಗೆ ನವೆಂಬರ್ 3ರಂದು ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ABOUT THE AUTHOR

...view details